ತರೀಕೆರೆ: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಿ.ಎಚ್.ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಸಿಗಬೇಕೆಂದು ಅವರ ಅಭಿಮಾನಿಗಳು ಮತ್ತು ಕ್ಷೇತ್ರದ ಜನತೆ ದೇವರ ಮೊರೆ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಜ್ಜಂಪುರ ತಾಲೂಕಿನ ಶಾಸಕರ ಅಭಿಮಾನಿ ಬಳಗವು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಟ್ಟಿಯೂರಿಗೆ ತೆರಳಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದೆ.
ಈಗಾಗಲೇ ಎರಡು ಬಾರಿ ಶಾಸಕರಾಗಿ ಗೆಲುವು ಸಾಧಿಸಿರುವ ಜಿ.ಎಚ್.ಶ್ರೀನಿವಾಸ್ ಅವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎನ್ನುವುದು ಕ್ಷೇತ್ರದ ಜನರ ಆಕಾಂಕ್ಷೆಯಾಗಿದೆ. ಇದರೊಂದಿಗೆ ಪ್ರಸ್ತುತ ಜಿಲ್ಲೆಯವರನ್ನೇ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿಯನ್ನಾಗಿ ಮಾಡಬೇಕು ಎಂಬ ಒತ್ತಾಯವೂ ಕೇಳಿಬಂದಿದೆ. ತರೀಕೆರೆ ತಾಲೂಕಿನ ಶ್ರೀನಿವಾಸ್ ಮತ್ತು ಶೃಂಗೇರಿ ಕ್ಷೇತ್ರದ ಶಾಸಕ ರಾಜೇಗೌಡ ಇಬ್ಬರೂ ತಲಾ ಎರಡು ಬಾರಿ ಜಯಗಳಿಸಿದ್ದು, ಜಿಲ್ಲೆಯ ನಾಯಕರಿಗೆ ಈ ಬಾರಿ ಸಚಿವ ಸ್ಥಾನ ಒಲಿಯಲಿದೆಯೇ ಎಂಬ ಕುತೂಹಲ ಮೂಡಿಸಿದೆ. ಒಟ್ಟಿನಲ್ಲಿ ತರೀಕೆರೆ ಶಾಸಕರಿಗೆ ಸಚಿವ ಪಟ್ಟ ಸಿಗಲೆಂದು ಅಭಿಮಾನಿಗಳು ಕೇರಳದ ಪವಿತ್ರ ಕ್ಷೇತ್ರದಲ್ಲಿ ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿ ಸಚಿವ ಸ್ಥಾನಕ್ಕಾಗಿ ಆಗ್ರಹಿಸಿದ್ದಾರೆ.
Kshetra Samachara
17/06/2026 03:40 pm
LOADING...