ಬೆಳಗಾವಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ, ಜಿಲ್ಲಾ ಎನ್.ಎಸ್.ಎಸ್., ಹಾಗೂ ಶ್ರೀ ಅನ್ನಪೂರ್ಣ ಮದ್ಯ ವ್ಯಸನಿಗಳ ಸಮಗ್ರ ಪುನರ್ವಸತಿ ಕೇಂದ್ರ ಇವರುಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಗರದ ಸರ್ದಾರ ಪಿ.ಯು. ಕಾಲೇಜಿನ ಆವರಣದಲ್ಲಿ ನಶಾ ಮುಕ್ತ ಭಾರತ ಅಭಿಯಾನ" ಸಪ್ತಾಹಕ್ಕೆ ಚಾಲನೆ ನೀಡಲಾಯಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಕೆ.ಎನ್.ಶಿವಕುಮಾರ ಅವರು ಸಸಿ ನೆಡುವುದರ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರೊಬೇಷನರಿ ಐ.ಎ.ಎಸ್. ಅಧಿಕಾರಿ ರೋಹಿತ್ ಸಿಂಗ್, ಕಾಲೇಜಿನ ಪ್ರಾಚಾರ್ಯರಾದ ವೈ.ಎಂ. ಪಾಟೀಲ, ಜಿಲ್ಲಾ ಎನ್.ಎಸ್.ಎಸ್. ಪ್ರೊಗ್ರಾಂ ಅಧಿಕಾರಿ ಎಂ. ಎ ಮುಲ್ಲಾ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಮದೇವ ಬೀಲ್ಕರ್ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಇದ್ದರು.
Kshetra Samachara
17/06/2026 06:59 pm
LOADING...