ಕೂಡ್ಲಿಗಿ: ಚುನಾವಣಾ ಆಯೋಗವು 'ಎಸ್‌ಐಆರ್' (SIR) ಹೆಸರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸುವ ಮೂಲಕ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಹೊರಟಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನೀತಿಯಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ವೀರಸಂಗಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಕೂಡ್ಲಿಗಿ ಪಟ್ಟಣದ ಶ್ರೀ ಕೊತ್ತಲಾಂಜನೇಯ ಪಾದಗಟ್ಟಿ ಹತ್ತಿರ ಎಸ್ಐಆರ್ ವಿರೋಧಿ ಸಭೆ ಕರ್ನಾಟಕ ಕೂಡ್ಲಿಗಿ ತಾಲೂಕು ಅಧ್ಯಕ್ಷರಾದ ನಲ್ಲ ಮುತ್ತಿ ರಮೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.
“ಚುನಾವಣಾ ಆಯೋಗವು ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆ ಬಾರದಂತೆ ಕಾಲಕಾಲಕ್ಕೆ ಮತದಾರರ ಪಟ್ಟಿಯನ್ನು ಪರಿಷ್ಕರಣೆ ಮಾಡುತ್ತಾ ಬಂದಿರುವುದು ಸ್ವಾಗತಾರ್ಹ. ಆದರೆ, ಪ್ರಸ್ತುತ ಜಾರಿಗೆ ತರಲು ಉದ್ದೇಶಿಸಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಪಾರದರ್ಶಕತೆಯಿಂದ ಕೂಡಿಲ್ಲ. ಇದು ಸಾಮಾನ್ಯ ಮತದಾರರನ್ನು ಪ್ರಕ್ರಿಯೆಯಿಂದ ಹೊರದಬ್ಬುವ ಮತ್ತು ಅವರ ಸಾಂವಿಧಾನಿಕ ಹಕ್ಕನ್ನು ವಂಚಿಸುವ ವ್ಯವಸ್ಥಿತ ಸಂಚಿನಂತೆ ಕಾಣುತ್ತಿದೆ ಅಂತ ರೈತ ಸಂಘಟನೆ ಮುಖಂಡರು ದೂರಿದರು.
PublicNext
17/06/2026 10:12 pm
LOADING...