ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ: ಮತದಾರರ ಪಟ್ಟಿಯಿಂದ ಅರ್ಹರು ಬಿಟ್ಟು ಹೋಗದಂತೆ ಎಚ್ಚರ ವಹಿಸಿ - ತಹಶೀಲ್ದಾರ್ ಶ್ರೀಧರ್

ಮಡಿಕೇರಿ : ಮತದಾರರ ಪಟ್ಟಿಯಲ್ಲಿ ಅರ್ಹ ಮತದಾರರು ಹೊರಗುಳಿಯದಂತೆ ಮತ್ತು ಹೊಸ ಮತದಾರರನ್ನು ಸೇರಿಸುವ ನಿಟ್ಟಿನಲ್ಲಿ ಬೂತ್ ಮಟ್ಟದ ಅಧಿಕಾರಿಗಳ ಸಹಕಾರ ಮುಖ್ಯ. ಆದ್ದರಿಂದ ಬೂತ್‍ಮಟ್ಟದ ಏಜೆಂಟರು ಮತ್ತು ಬೂತ್ ಮಟ್ಟದ ಅಧಿಕಾರಿಗಳು ಸಮನ್ವಯ ಸಾಧಿಸಿಕೊಂಡು ಕಾರ್ಯನಿರ್ವಹಿಸುವಂತೆ ಮಡಿಕೇರಿ ತಾಲ್ಲೂಕು ತಹಶೀಲ್ದಾರ್ ಆರ್.ಶ್ರೀಧರ್ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮತಗಟ್ಟೆ ಏಜೆಂಟರುಗಳಿಗೆ ಎಸ್‍ಐಆರ್ ಕುರಿತು ನಡೆದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಏಜೆಂಟರು ಎಸ್‍ಐಆರ್ ಪ್ರಕ್ರಿಯೆಯ ಸಂಪೂರ್ಣ ಮಾಹಿತಿ ತಿಳಿದುಕೊಂಡು, ಪಾರದರ್ಶಕವಾಗಿ ಮತದಾರರ ಪಟ್ಟಿ ಸಿದ್ಧಗೊಳ್ಳಲು ಸಹಕರಿಸಬೇಕು, ಮತದಾರರಿಗೆ ಯಾವುದೇ ತೊಂದರೆಯಾಗದಂತೆ ಗಮನಹರಿಸಬೇಕು. ಕೈಬಿಟ್ಟ ಹೆಸರುಗಳನ್ನು ಮತ್ತೆ ಸೇರಿಸಲು ನಮೂನೆ ಭರ್ತಿ ಮಾಡಲು ಸಹಾಯ ಮಾಡಬೇಕು, ಮತಗಟ್ಟೆ ಹಂತದಲ್ಲಿನ ದೋಷಗಳನ್ನು ಗುರುತಿಸಿ, ಚುನಾವಣಾ ಅಧಿಕಾರಿಗಳಿಗೆ ಸರಿಯಾದ ಸಮಯದಲ್ಲಿ ಮಾಹಿತಿ ನೀಡಬೇಕು ಎಂದು ಆರ್.ಶ್ರೀಧರ್ ಅವರು ತಿಳಿಸಿದರು.

Edited By : PublicNext Desk
Kshetra Samachara

Kshetra Samachara

18/06/2026 07:44 am

Cinque Terre

80

Cinque Terre

0

ಸಂಬಂಧಿತ ಸುದ್ದಿ