ಮಡಿಕೇರಿ: 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಪ್ರತಿ ವರ್ಷದಂತೆ ಜೂನ್, 21 ರಂದು ಆಯುಷ್ ಮಂತ್ರಾಲಯ, ಭಾರತ ಸರ್ಕಾರ, ಆಯುಷ್ ಇಲಾಖೆ ಕರ್ನಾಟಕ ಸರ್ಕಾರ ಮತ್ತು ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ ವತಿಯಿಂದ ಆಚರಿಸಲು ನಿರ್ಧರಿಸಲಾಗಿದೆ.
12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಕೊಡಗು ಜಿಲ್ಲೆ, ಶಾಲಾ ಶಿಕ್ಷಣ ಇಲಾಖೆ, ಯೋಗ ಒಕ್ಕೂಟ, ಮಡಿಕೇರಿ, ಸ್ಕೌಟ್ಸ್ ಮತ್ತು ಗೈಡ್ಸ್, ಜಿಲ್ಲಾ ಪೊಲೀಸ್ ಇಲಾಖೆರವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಮೈದಾನದಿಂದ ಹಳೆಯ ಖಾಸಗಿ ಬಸ್ ನಿಲ್ದಾಣ ಮೂಲಕ ಗಾಂಧಿ ಮೈದಾನದವರೆಗೆ ಜಾಥಾ ನಡೆಯಿತು.
ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ಜಾಥಾಗೆ ಚಾಲನೆ ನೀಡಿದರು.
Kshetra Samachara
18/06/2026 07:47 am
LOADING...