ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ: ಉಪ ನಿರ್ದೇಶಕರಾಗಿ ಬಡ್ತಿ -ಗುರುಸ್ವಾಮಿಗೆ ಬೀಳ್ಕೊಡುಗೆ

ಮಡಿಕೇರಿ: ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಕಳೆದ ಹಲವು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ.ಎಸ್.ಗುರುಸ್ವಾಮಿ ಅವರು ಉಪ ನಿರ್ದೇಶಕರಾಗಿ ಮುಂಬಡ್ತಿ ಹೊಂದಿ, ವರ್ಗಾವಣೆಗೊಂಡಿರುವ ಹಿನ್ನೆಲೆ ಕೈಗಾರಿಕೆ, ಕೈಮಗ್ಗ ಮತ್ತು ಜವಳಿ ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ಸೇರಿದಂತೆ ವಿವಿಧ ಇಲಾಖೆ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಡಲಾಯಿತು.

ಶಾಲೂ, ಫಲ ತಾಂಬೂಲ, ಪೇಟ ಹಾಗೂ ಉಡುಗೊರೆ ನೀಡಿ ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಕೈಗಾರಿಕಾ ಸರಬರಾಜು ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷ ಸಿ.ವಿ.ನಾಗೇಶ್ ಅವರು ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಉತ್ತಮ ಕೆಲಸ ನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Edited By : PublicNext Desk
PublicNext

PublicNext

18/06/2026 07:49 am

Cinque Terre

2.09 K

Cinque Terre

0

ಸಂಬಂಧಿತ ಸುದ್ದಿ