ಮಡಿಕೇರಿ : ಮಳೆಗಾಲದ ಅವಧಿಯಲ್ಲಿ ರಸ್ತೆ ಅಪಘಾತ ತಡೆಯಲು ರಸ್ತೆ ಸುರಕ್ಷತಾ ನಿಯಮಗಳು ಮತ್ತು ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ನಿರ್ದೇಶನ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ `ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ' ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅಪಘಾತ ವಲಯಗಳನ್ನು ಗುರುತಿಸಿ, ಇಂತಹ ಸ್ಥಳಗಳಲ್ಲಿ ಸೂಕ್ತ ರಸ್ತೆ ಸುರಕ್ಷತಾ ಕ್ರಮ ವಹಿಸಬೇಕು. ಅಪಘಾತ ಸಂಭವಿಸುವ ರಸ್ತೆಗಳಲ್ಲಿ ಸಂಚಾರ ಚಿಹ್ನೆ ಹಾಗೂ ರಸ್ತೆ ಗುರುತು ಫಲಕ ಅಳವಡಿಸಬೇಕು. ಅವಶ್ಯವಿದ್ದೆಡೆ ಬ್ಯಾರಿಕೇಡ್ ಸೇರಿದಂತೆ ಸುರಕ್ಷತಾ ಕ್ರಮವಹಿಸಿ ರಸ್ತೆ ನಿಯಮಗಳ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಈ ಹಿಂದೆ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆ ಅನುಷ್ಠಾನ ಕುರಿತಂತೆ ಸಂಬಂಧಪಟ್ಟ ಇಲಾಖೆಯವರು ತೆಗೆದುಕೊಂಡ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭ ಮಾತನಾಡಿದ ರಾಷ್ಟ್ರೀಯ ಹೆದ್ದಾರಿ ಉಪ-ವಿಭಾಗದ ಸಹಾಯಕ ಎಂಜಿನಿಯರ್ ಎಂ.ಹನುಮಂತ ಅವರು ಸಂಪಾಜೆಯಿಂದ-ಕುಶಾಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಚ್ಚರಿಕೆಯ ಬೋರ್ಡ್ ಅಳವಡಿಸಲು ಮುಂದಾಗಲಿದೆ ಎಂದರು.
.
Kshetra Samachara
18/06/2026 07:50 am
LOADING...