ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ: ನೀಟ್ ಯುಜಿ ಮರುಪರೀಕ್ಷೆ ಸಿದ್ಧತೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ

ಮಡಿಕೇರಿ: ಇದೇ ಜೂನ್, 21 ರಂದು ನಡೆಯುವ ನೀಟ್ ಯುಜಿ-2026 ಮರುಪರೀಕ್ಷೆ ಸಿದ್ಧತೆ ಬಗ್ಗೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಮಾಹಿತಿ ಪಡೆದರು.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನೀಟ್ ಮರುಪರೀಕ್ಷೆ ನೋಡಲ್ ಅಧಿಕಾರಿ ಕೇಂದ್ರೀಯ ವಿದ್ಯಾಲಯದ ಪ್ರಾಂಶುಪಾಲರಾದ ಭಾಗ್ಯನಂದನ್, ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಬಸವರಾಜು ಅವರಿಂದ ಮಾಹಿತಿ ಪಡೆದರು.

ನೀಟ್(ಯುಜಿ) ಮರು ಪರೀಕ್ಷೆಯನ್ನು ಯಾವುದೇ ಗೊಂದಲಕ್ಕೆ ಅವಕಾಶ ಮಾಡದೆ ಸುಗಮ ಹಾಗೂ ಸುಲಲಿತವಾಗಿ ನಡೆಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳಲ್ಲಿ ಸಿಸಿಟಿವಿ ಅಳವಡಿಸುವುದು, ಪರೀಕ್ಷೆ ಬರೆಯುವ ಕೇಂದ್ರದಲ್ಲಿ ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ನೋಡಿಕೊಂಡು ಪರೀಕ್ಷೆ ಕೊಠಡಿಗೆ ತೆರಳುವಂತಾಗಲು ನೋಂದಣಿ ಸಂಖ್ಯೆ ಬೋರ್ಡ್‍ಗಳನ್ನು ಅಳವಡಿಸುವುದು, ಶುದ್ಧ ಕುಡಿಯುವ ನೀರು ವ್ಯವಸ್ಥೆ ಮಾಡುವುದು, ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಪ್ರಾಧಿಕಾರದ ನಿಯಮಗಳನ್ನು ಚಾಚು ತಪ್ಪದೇ ಪಾಲಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಪ್ರಶ್ನೆ ಪತ್ರಿಕೆ ತರಿಸಿಕೊಳ್ಳುವುದು, ಉತ್ತರ ಪತ್ರಿಕೆ ರವಾನಿಸುವುದು ಸೇರಿದಂತೆ ಪರೀಕ್ಷಾ ಪ್ರಾಧಿಕಾರದ ನಿಯಮಗಳನ್ನು ಚಾಚುತಪ್ಪದೆ ಪಾಲಿಸಬೇಕು ಎಂದು ಸೂಚಿಸಿದರು.

Edited By : PublicNext Desk
Kshetra Samachara

Kshetra Samachara

18/06/2026 07:59 am

Cinque Terre

80

Cinque Terre

0

ಸಂಬಂಧಿತ ಸುದ್ದಿ