ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಪೊಲೀಸ್ ಸಮುದಾಯ ಭವನಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರೂ ಭೇಟಿ

ಚಿತ್ರದುರ್ಗ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರೂ ಪೊಲೀಸ್ ಸಮುದಾಯ ಭವನಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಪೊಲೀಸ್ ಸಮುದಾಯ ಭವನದ ಸ್ಥಿತಿಗತಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ದುರಸ್ತಿ ಕಾರ್ಯಗಳ ಕುರಿತು ಕೂಡಾ ವೀಕ್ಷಣೆ ಮಾಡಿದ್ದು, ದುರಸ್ತಿ ಮಾಡಿಸಲು ಕೂಡಾ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಇನ್ನೂ ಸಮುದಾಯ ಭವನದ ಸುತ್ತಮುತ್ತಲಿನ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸೂಕ್ತ ಸಲಹೆ ನೀಡಿದ್ದಾರೆ. ಈ ವೇಳೆ ಎಎಸ್ಪಿ ಡಾ. ಶಿವಕುಮಾರ್, ಡಿಎಆರ್ ಡಿವೈಎಸ್ಪಿ ಸೇರಿ ಹಲವು ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

Edited By : PublicNext Desk
Kshetra Samachara

Kshetra Samachara

18/06/2026 08:12 am

Cinque Terre

420

Cinque Terre

0

ಸಂಬಂಧಿತ ಸುದ್ದಿ