ಚಿತ್ರದುರ್ಗ: ರಾಜ್ಯದಲ್ಲಿ ವಿಧಾನ ಪರಿಷತ್ ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷಕ್ಕೂ ಶಾಸಕರ ಅಡ್ಡ ಮತದಾನದ ಭೀತಿ ಎದುರಾಗಿದೆ. ಈ ನಡುವೆ ಮಾಜಿ ಮುಖ್ಯಮಂತ್ರಿ HD ಕುಮಾರಸ್ವಾಮಿ ಮೊಳಕಾಲ್ಮೂರು ಶಾಸಕರಿಗೆ ಫೋನ್ ಕರೆ ಮಾಡಿ, ಆಮಿಷ ಒಡ್ಡಿರುವುದು ಗೊತ್ತಾಗಿದೆ. ಶಾಸಕ ಎನ್.ವೈ. ಗೋಪಾಲಕೃಷ್ಣ ಅವರಿಗೆ ದೂರವಾಣಿ ಕರೆ ಮಾಡಿರುವ HDK ಜೆಡಿಎಸ್ ಅಭ್ಯರ್ಥಿಗೆ ಎರಡನೇ ಪ್ರಾಶಸ್ತ್ಯ ಮತ ಹಾಕುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಸತತ ಏಳು ಬಾರಿ ಶಾಸಕರಾಗಿರುವ ಎನ್ ವೈ ಗೋಪಾಲಕೃಷ್ಣ ಮಂತ್ರಿಸ್ಥಾನಕ್ಕಾಗಿ ಸರ್ಕಸ್ ಮಾಡ್ತಿದ್ದಾರೆ. ಈ ನಡುವೆ ಮತ್ತೆ MLC ಎಲೆಕ್ಷನ್ ವೇಳೆ ಮತ್ತೆ ಇವರ ಹೆಸರು ಮುನ್ನೆಲೆಗೆ ಬಂದಿದೆ. ಈ ವಿಚಾರ ಖುದ್ದು CM ಡಿಕೆಶಿ CLP ಸಭೆಯಲ್ಲಿ ಪ್ರಸ್ತಾಪ ಮಾಡಿದ್ದಾರೆ. ನಮ್ಮ ಕೆಲವು ಶಾಸಕರಿಗೆ ಜೆಡಿಎಸ್ ನಾಯಕರು ಫೋನ್ ಕರೆ ಮಾಡಿ ಸಂಪರ್ಕಿಸಿದ್ದಾರೆ, ಮೊಳಕಾಲ್ಮೂರು ಶಾಸಕ ಎನ್.ವೈ. ಗೋಪಾಲಕೃಷ್ಣ ಅವರಿಗೆ ಫೋನ್ ಮಾಡಿದ್ದಾರೆ ಎಂದಿದ್ದಾರೆ. ಇದೇ ವೇಳೆ ಶಾಸಕ ಎನ್.ವೈ. ಗೋಪಾಲಕೃಷ್ಣ ಕೂಡಾ ಹೆಚ್.ಡಿಕೆ ಫೋನ್ ಮಾಡಿದ್ದನ್ನ ಖುದ್ದು ಸಭೆಯಲ್ಲಿ ಒಪ್ಪಿಕೊಂಡಿದ್ದಾರೆ
Kshetra Samachara
18/06/2026 08:13 am
LOADING...