ಮೇಷ: ಕಡ್ಡಿ ಮುರಿದಂತೆ ಮಾತಾಡದಿರಿ. ಎಲ್ಲ ಕಾರ್ಯಗಳಲ್ಲೂ ಯಶಸ್ಸು ಖಚಿತ. ವಸ್ತ್ರ, ಸಿದ್ಧ ಉಡುಪು, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಉತ್ತಮ ಲಾಭ. ಅಶಕ್ತರಿಗೆ ನೆರವಾಗುವ ಅವಕಾಶ.
ವೃಷಭ: ಉದರದ ಆರೋಗ್ಯದ ಕಡೆಗೆ ಗಮನ ಇರಲಿ. ಕನ್ಯಾನ್ವೇಷಿಗಳಿಗೆ ಶುಭ ವಾರ್ತೆ. ಅಲ್ಪಾವಧಿ ಹೂಡಿಕೆಗಳು ಬೇಡ. ಕೃಷ್ಯುತ್ಪನ್ನಗಳಿಂದ ಸಾಮಾನ್ಯ ಲಾಭ.
ಮಿಥುನ: ರಂಗಿನ ಮಾತುಗಳಿಗೆ ಮರುಳಾಗದಿರಿ. ಅಧ್ಯಾತ್ಮ ಜೀವಿಗಳಿಗೆ ಆಂತರಿಕ ಸಮಾಧಾನ. ಇಷ್ಟದೇವರ ದರ್ಶನದಿಂದ ಶುಭ. ಗೃಹಿಣಿಯರಿಗೆ ತಕ್ಕಮಟ್ಟಿಗೆ ಕ್ಷೇಮದ ದಿನ.
ಕರ್ಕಾಟಕ: ಮೋಸಗಾರರ ಬಗೆಗೆ ಎಚ್ಚರ. ಇಲೆಕ್ಟ್ರಾನಿಕ್ಸ್ ಕೆಲಸಗಾರರಿಗೆ ಅನುಕೂಲ. ದೂರದಲ್ಲಿರುವ ಬಂಧುಗಳಿಂದ ಶುಭವಾರ್ತೆ. ತಿಂಡಿ, ತೀರ್ಥ ವ್ಯಾಪಾರಿಗಳಿಗೆ ಲಾಭ.
ಸಿಂಹ: ಸತ್ಕರ್ಮಿಗಳ ನೈತಿಕ ಬಲ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಲಾಭ. ಆಸ್ತಿ ವ್ಯವಹಾರದಲ್ಲಿ ಎಚ್ಚರಿಕೆ ಇರಲಿ. ಸರಕಾರಿ ನೌಕರರಿಗೆ ಸತ್ವಪರೀಕ್ಷೆ.
ಕನ್ಯಾ: ಮುಜುಗರದಿಂದ ಪಾರಾದ ಸಜ್ಜನರು. ಹೊಲಿಗೆ, ಕಸೂತಿ ಬಲ್ಲವರಿಗೆ ಅದೃಷ್ಟದ ದಿನ. ಬಂಧುಗಳ ಮನೆಯ ಶುಭಕಾರ್ಯಕ್ಕೆ ಸಹಾಯ.
ತುಲಾ: ಕೆಲವು ವರ್ಗದ ವ್ಯಾಪಾರಿಗಳಿಗೆ ಹೆಚ್ಚು ಅನುಕೂಲ. ಲಲಿತಕಲೆಗಳಲ್ಲಿ ಪರಿಶ್ರಮ ಉಳ್ಳವರಿಗೆ ಸಂತೃಪ್ತಿ. ಸಾಮೂಹಿಕ ಪ್ರಾರ್ಥನೆಯಿಂದ ಸಮಾಜಕ್ಕೆ ಒಳಿತು. ಕರಕುಶಲ ಸಾಮಗ್ರಿ ವ್ಯಾಪಾರದಲ್ಲಿ ಲಾಭ.
ವೃಶ್ಚಿಕ: ಉದ್ಯೋಗ, ಉದ್ಯಮಗಳಲ್ಲಿ ಯಶಸ್ಸು ಸಾಧನೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಆದಾಯ ವೃದ್ಧಿ. ಭೂ ವ್ಯವಹಾರ ಕುದುರಿಸಲು ಪ್ರಯತ್ನ. ಕೈಮಗ್ಗದ ಕೆಲಸ ಬಲ್ಲವರಿಗೆ ಅವಕಾಶ.
ಧನು: ನೆಲ, ಜಲ ಸಂರಕ್ಷಣೆಯ ಕಾರ್ಯಗಳಲ್ಲಿ ಭಾಗಿ. ಸಹೋದ್ಯೋಗಿ ಮಿತ್ರರಿಗೆ ಮಾರ್ಗದರ್ಶನ. ಸಣ್ಣ ಹೂಡಿಕೆಗಳಲ್ಲಿ ಸಾಮಾನ್ಯ ಲಾಭ. ಶಿಕ್ಷಕ ವರ್ಗದ ಹಿತರಕ್ಷಣೆಗೆ ಪ್ರಯತ್ನ.
ಮಕರ: ಶಿಕ್ಷಕ ವರ್ಗಕ್ಕೆ ಸಮಾಧಾನದ ದಿನ. ನಿತ್ಯೋಪಯೋಗಿ ಸಾಮಗ್ರಿ ವಿತರಕರಿಗೆ ಸಡಿಲಾದ ಪೂರೈಕೆ ಒತ್ತಡ. ಹಿರಿಯರ ಆರೋಗ್ಯ ಸುಧಾರಣೆ. ನಷ್ಟವಿಲ್ಲದ ಪರೋಪಕಾರ ಮಾಡುವ ಅವಕಾಶ.
ಕುಂಭ: ನಿತ್ಯ ಸಂಪದಭಿವೃದ್ಧಿ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಮಗ್ನತೆ. ಯಂತ್ರೋಪಕರಣ ವ್ಯಾಪಾರಿಗಳ ಪಾಲಿಗೆ ಶುಭದಿನ. ಯುವಜನರ ಪಾಲುಗೊಳ್ಳುವಿಕೆಯಲ್ಲಿ ಶ್ರಮದಾನ.
ಮೀನ: ಉದ್ಯೋಗ, ವ್ಯವಹಾರಗಳಲ್ಲಿ ಅನುಕೂಲ. ಬಂಧುವರ್ಗದ ಜನರಿಗೆ ಸಹಾಯ. ಭೂ ವ್ಯವಹಾರದಲ್ಲಿ ಲಾಭ. ಬಂಗಾರದ ಕೆಲಸ ಬಲ್ಲವರಿಗೆ ಸದವಕಾಶ.
PublicNext
18/06/2026 09:37 am