ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್ ಸ್ಟೇಷನ್ ಬಳಿ ಬಸ್ ಸ್ಕೂಟಿಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರ ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಕಾಪು ಸರ್ವಿಸ್ ರಸ್ತೆಯಲ್ಲಿ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುವ ಎಕ್ಸ್ಪ್ರೆಸ್ ಬಸ್ ಎದುರಿನಿಂದ ಹೆದ್ದಾರಿಯಲ್ಲಿ ಹೋಗುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಗಂಭೀರ ಗಾಯಗೊಂಡಿರುವ ಸ್ಕೂಟಿ ಸವಾರನನ್ನು ಮಂಗಳೂರು ಸಸಿಹಿತ್ಲು ನಿವಾಸಿ, ಪ್ರಸ್ತುತ ಕಾಪುವಿನಲ್ಲಿರುವ ಗಣೇಶ್ ಪಾತ್ರಿ ಎಂದು ಗುರುತಿಸಲಾಗಿದೆ. ಗಾಯಾಳು ಸ್ಕೂಟಿ ಸವಾರನನ್ನು ಸ್ಥಳೀಯರು ಆಂಬುಲೆನ್ಸ್ ಮೂಲಕ ಉಡುಪಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸ್ಕೂಟಿಗೆ ಡಿಕ್ಕಿ ಹೊಡೆದ ಬಸ್ ಡಿವೈಡರ್ ಮೇಲೆ ಹೋಗಿ ನಿಂತಿದ್ದು ಭಾರಿ ಪ್ರಮಾಣದ ಅಪಾಯ ತಪ್ಪಿದಂತಾಗಿದೆ. ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
PublicNext
18/06/2026 12:05 pm
LOADING...