ಬೆಂಗಳೂರು: ಬಾಗಲೂರು ಸಮೀಪದ ಬಂಡಿಕೊಡಿಗೇಹಳ್ಳಿಯಲ್ಲಿ ನಡೆದ ದುರಂತ ಘಟನೆಯಲ್ಲಿ, ಕಾಂಪೌಂಡ್ ಗೋಡೆ ಕುಸಿದು ಐದು ವರ್ಷದ ಮಗು ಅಫೀನ್ (5) ಸಾವನ್ನಪ್ಪಿದೆ. ನಿನ್ನೆ ಸಂಜೆ 6:30ರ ಸುಮಾರಿಗೆ ಸಂಭವಿಸಿದ ಈ ಅವಘಡದಲ್ಲಿ, ಮತ್ತೋರ್ವ ಬಾಲಕಿ ಸಮನ್ವಿಗೆ ಗಾಯಗಳಾಗಿದ್ದು, ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ನಡೆದಾಗ, ಮೂವರು ಮಕ್ಕಳು ಕಾಂಪೌಂಡ್ ಗೇಟ್ ಬಳಿ ಆಟವಾಡುತ್ತಿದ್ದರು. ಆ ಸಮಯದಲ್ಲಿ ಇದ್ದಕ್ಕಿದ್ದಂತೆ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ಈ ಗೋಡೆ ಮೊದಲೇ ಬಿರುಕು ಬಿಟ್ಟಿತ್ತು ಎನ್ನಲಾಗಿದ್ದು, ಇದು ದುರಂತಕ್ಕೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಘಟನೆ ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
PublicNext
18/06/2026 02:28 pm
LOADING...