ತುಮಕೂರು : ತುಮಕೂರು ತಾಲ್ಲೂಕು ಕೋರ ಹೋಬಳಿ ಬೆಳಧರ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ರಾಜಾರೋಷವಾಗಿ ನಡೆಯುತ್ತಿದ್ದು ಇದಕ್ಕೆ ಕಡಿವಾಣ ಹಾಕುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಕೋರ ಹೋಬಳಿ ನರಸೀಪುರ,ಕಂಬದ ರಂಗದಸ್ವಾಮಿ ದೇವಾಲಯ, ಚನ್ನಪಟ್ಟಣದ, ಅಕ್ಕ ಪಕ್ಕದ ಸರ್ಕಾರಿ ಹಾಗೂ ಗೋಮಾಳ ಜಮೀನುಗಳಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ರಾಜಾರೋಷವಾಗಿ ನಡೆಯುತ್ತಿದೆ,ಕಂದಾಯ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದರೆ,ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿದ್ದೆಗೆ ಜಾರಿರುವುದು ಸಾಕಷ್ಟು ಅನುಮಾನ ಹುಟ್ಟು ಹಾಕಿದೆ.
ಕಂದಾಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ
ಬೆಳಧರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದರೂ ಸಹ ಕಂದಾಯ ಇಲಾಖೆ ಕ್ರಮ ಜರುಗಿಸದಿರುವುದು ಸ್ಥಳೀಯರಲ್ಲಿ ಸಾಕಷ್ಟು ಅನುಮಾನ ಹುಟ್ಟು ಹಾಕಿದೆ,ಸರ್ಕಾರಕ್ಕೆ ರಾಜಧನ ಪಾವತಿಸದೆ ಅಕ್ರಮವಾಗಿ ಸೈಜು ಗಲ್ಲುಗಳನ್ನು ತೆಗೆಯುತ್ತಿದ್ದು ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ,ಕಲ್ಲುಗಣಿಗಾರಿಕೆಗೆ ಅನುಮತಿ ಪಡೆದವರು ಬೀದಿಗೆ ಬೀಳುವ ಸ್ಥಿತಿ ನಿರ್ಮಾಣವಾಗಿದೆ,ಕಂದಾಯ ಇಲಾಖೆ ಅಧಿಕಾರಿಗಳಿಗೆ ಅಕ್ರಮ ಗೊತ್ತಿದ್ದರೂ ನೋಟೀಸ್ ಜಾರಿಗೊಳಿಸಿ ಕ್ರಮಕ್ಕೆ ಮುಂದಾಗದಿರುವುದು ಹಲವು ಅನುಮಾನಕ್ಕೆಡೆಮಾಡಿದೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಬೇಜವಾಬ್ದಾರಿ
ಬೆಳಧರ ಭಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದರೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ದಂಧೆಕೋರರ ವಿರುದ್ಧ ಕ್ರಮ ಜರುಗಿಸಿಲ್ಲ,ಬರೀ ಉಡಾಪೆ ಉತ್ತರ ಹೇಳಿ ಕಾಲ ಕಳೆಯುತ್ತಿದ್ದಾರೆ,ಸರ್ಕಾರಕ್ಕೆ ಲಕ್ಷಾಂತರ ರೂ ನಷ್ಟವಾಗುತ್ತಿದ್ದು,ಇದಕ್ಕೆ ಕಡಿವಾಣ ಹಾಕಲು ಅಧಿಕಾರಿಗಳು ಮುಂದಾಗುತ್ತಿಲ್ಲ,ಅಧಿಕಾರಿಗಳೇ ಕಲ್ಲು ದಂಧೆಕೋರರೊಂದಿಗೆ ಶಾಮೀಲಾಗಿ ಅಕ್ರಮಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಇನ್ನಾದರೂ ನಿದ್ದೆಗೆ ಜಾರಿರುವ ಕಂದಾಯ ಹಾಗೂ ಗಣಿ ಇಲಾಖೆ ಎಚ್ಚೆತ್ತು ದಂಧೆ ಕೋರರಿಗೆ ಚುರುಕು ಮುಟ್ಟಿಸುತ್ತದೆಯಾ ಎಂಬುದನ್ನು ಕಾದು ನೋಡಬೇಕಿದೆ.
Kshetra Samachara
18/06/2026 02:57 pm