ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಂಧನೂರು: ಅಪರಿಚಿತ ವಾಹನ ಡಿಕ್ಕಿ - ಕುರಿಗಾಯಿ ಸಾವು

ಸಿಂಧನೂರು: ನಗರದ ಗಂಗಾವತಿ ಮುಖ್ಯರಸ್ತೆಯಲ್ಲಿ ಗುರುವಾರ ಬೆಳಗಿನ ಜಾವ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಕುರಿಗಾಯಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಸ್ಕಿ ತಾಲ್ಲೂಕಿನ ತುಪ್ಪದೂರು ಗ್ರಾಮದ ನಿವಾಸಿ, ಕುರಿಗಾಯಿ ಶರಣಬಸವ (30) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಶರಣಬಸವ ಅವರು ತಮ್ಮ ಕುರಿಗಳನ್ನು ಮೇಯಿಸಿಕೊಂಡು ಗಂಗಾವತಿ ಮುಖ್ಯ ರಸ್ತೆಯಲ್ಲಿ ಸಾಸಲಮರಿ ಕಡೆಗೆ ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪರಿಚಿತ ವಾಹನವೊಂದು ವೇಗವಾಗಿ ಬಂದು ಢಿಕ್ಕಿ ಹೊಡೆದ ಪರಿಣಾಮ, ಶರಣಬಸವ ಸೇರಿದಂತೆ ಮೂರು ಕುರಿಗಳು ಸ್ಥಳದಲ್ಲೇ ಮೃತಪಟ್ಟಿವೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಅಪಘಾತಕ್ಕೆ ಕಾರಣವಾದ ವಾಹನ ಮತ್ತು ಚಾಲಕನಿಗಾಗಿ ತನಿಖೆ ನಡೆಸುತ್ತಿದ್ದಾರೆ.

Edited By : Nagaraj Tulugeri
PublicNext

PublicNext

18/06/2026 03:25 pm

Cinque Terre

6.76 K

Cinque Terre

0