ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: RSS ನೋಂದಣಿ ಕುರಿತಾದ ವಿವಾದಕ್ಕೆ ಪ್ರತಿಕ್ರಿಯಿಸಲು ಸಂಸದ ಚೌಟ ನಕಾರ..!

ಮಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ಯ ತೀವ್ರ ಚರ್ಚೆಗೆ ಗ್ರಾಸವಾಗಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ನೋಂದಣಿ ಕುರಿತಾದ ವಿವಾದಕ್ಕೆ ಪ್ರತಿಕ್ರಿಯಿಸಲು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ನಿರಾಕರಿಸಿದ್ದಾರೆ.

ಪುತ್ತೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳು ಈ ಕುರಿತು ಪ್ರಶ್ನಿಸಿದಾಗ, ಸಂಸದರು ಯಾವುದೇ ಹೇಳಿಕೆ ನೀಡದೆ ಅಲ್ಲಿಂದ ನಿರ್ಗಮಿಸಿದರು.ರಾಜ್ಯ ಸರ್ಕಾರದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಇತ್ತೀಚೆಗೆ ಆರ್‌ಎಸ್‌ಎಸ್ ಸಂಘಟನೆಯ ಅಧಿಕೃತ ನೋಂದಣಿ ಹಾಗೂ ಅದರ ಕಾನೂನಾತ್ಮಕ ಚೌಕಟ್ಟಿನ ಕುರಿತು ಸರಣಿ ಪ್ರಶ್ನೆಗಳನ್ನು ಎತ್ತುವ ಮೂಲಕ ಹೊಸ ಚರ್ಚೆಯೊಂದನ್ನು ಹುಟ್ಟುಹಾಕಿದ್ದರು.

ಈ ಹೇಳಿಕೆಯು ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷವಾದ ಬಿಜೆಪಿ ನಡುವೆ ದೊಡ್ಡ ಮಟ್ಟದ ವಾಗ್ಯುದ್ಧಕ್ಕೆ ಕಾರಣವಾಗಿದೆ. ಹಿಂದುತ್ವದ ಪ್ರಬಲ ಕೋಟೆಯಾಗಿರುವ ಕರಾವಳಿ ಭಾಗದಲ್ಲೂ ಈ ಬಗ್ಗೆ ಪರ-ವಿರೋಧದ ಚರ್ಚೆಗಳು ಜೋರಾಗಿವೆ.

Edited By :
PublicNext

PublicNext

18/06/2026 07:08 pm

Cinque Terre

13.13 K

Cinque Terre

0

ಸಂಬಂಧಿತ ಸುದ್ದಿ