ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ತಡಂಬೈಲ್‌ನಲ್ಲಿ ತಡರಾತ್ರಿ ಸರಣಿ ಅಪಘಾತ-ಹಲವರಿಗೆ ಗಂಭೀರ ಗಾಯ

ಸುರತ್ಕಲ್: ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ತಡಂಬೈಲ್ ಜಂಕ್ಷನ್‌ನಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾತ್ರಿ ಸುಮಾರು 11.30ರ ವೇಳೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಖಾಸಗಿ ಸಂಸ್ಥೆಗೆ ಸೇರಿದ ಸ್ವೀಪರ್ ಬಸ್, ಮುಂದೆ ಸಾಗುತ್ತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೇ ವೇಳೆ ಹಿಂದಿನಿಂದ ಬರುತ್ತಿದ್ದ ಮತ್ತೊಂದು ಕಾರು ಕೂಡ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ.

ಅಪಘಾತದ ತೀವ್ರತೆಗೆ ಎರಡೂ ಕಾರುಗಳಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ. ಸ್ಥಳೀಯರು ತಕ್ಷಣ 108 ಆಂಬ್ಯುಲೆನ್ಸ್‌ಗೆ ಮಾಹಿತಿ ನೀಡಿದ್ದು, ಗಾಯಾಳುಗಳನ್ನು ಸುರತ್ಕಲ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಿಂದ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಸುದ್ದಿ ತಿಳಿಯುತ್ತಿದ್ದಂತೆ ಸುರತ್ಕಲ್ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿ, ಕ್ರೇನ್ ಮೂಲಕ ' ವಾಹನಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು. ಸುರತ್ಕಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಚಾಲಕನ ಅತಿವೇಗ ಹಾಗೂ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ.

Edited By : PublicNext Desk
Kshetra Samachara

Kshetra Samachara

18/06/2026 07:25 pm

Cinque Terre

1.18 K

Cinque Terre

0

ಸಂಬಂಧಿತ ಸುದ್ದಿ