ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶೃಂಗೇರಿ: ಅಪ್ರಾಪ್ತೆಯ ಮೇಲೆ ಅಸಭ್ಯ ವರ್ತನೆ: ಕಾಮುಕ ಶಬೀರ್ ಬಂಧನ!

ಶೃಂಗೇರಿ: ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಶೃಂಗೇರಿ ಪೊಲೀಸರು ಬಂಧಿಸಿದ್ದಾರೆ. ಶೃಂಗೇರಿ ಪಟ್ಟಣದಲ್ಲಿ ಕುಷನ್ ಅಂಗಡಿ ನಡೆಸುತ್ತಿದ್ದ ಶಬೀರ್ (ಶಮೀರ್) ತನ್ನ ಅಂಗಡಿ ಬಳಿ ಅಪ್ರಾಪ್ತ ಬಾಲಕಿಯ ಖಾಸಗಿ ಅಂಗವನ್ನು ಸ್ಪರ್ಶಿಸಿ ಅಸಭ್ಯವಾಗಿ ವರ್ತಿಸಿದ್ದಾನೆ. ಘಟನೆಯ ಬಳಿಕ ಮನೆಗೆ ಬಂದ ಬಾಲಕಿಯು ತನ್ನ ತಾಯಿಗೆ ವಿಷಯ ತಿಳಿಸಿದ್ದು. ಇದರಿಂದ ಆಘಾತಕ್ಕೊಳಗಾದ ಬಾಲಕಿಯ ತಾಯಿ ಶೃಂಗೇರಿ ಪೊಲೀಸ್ ಠಾಣೆಗೆ ತೆರಳಿ ಆರೋಪಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರು ದಾಖಲಿಸಿದ್ದಾರೆ. ಪೋಷಕರ ದೂರಿನ ಅನ್ವಯ ಕಾರ್ಯಪ್ರವೃತ್ತರಾದ ಶೃಂಗೇರಿ ಪೊಲೀಸರು, ಆರೋಪಿ ಶಬೀರ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಸ್ತುತ ಆರೋಪಿಯ ವಿರುದ್ಧ ಹೊಸ ಕಾನೂನಿನ ಕಲಂ ಪೋಕ್ಸೋ ಕಾಯ್ದೆ ಹಾಗೂ ಎಸ್ಸಿ/ಎಸ್ಟಿ (SC/ST) ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಮುಂದಿನ ತನಿಖೆಯನ್ನು ಕೈಗೆತ್ತಿಕೊಂಡಿದ್ದು ಆರೋಪಿಯ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

Edited By :
PublicNext

PublicNext

18/06/2026 07:42 pm

Cinque Terre

14.34 K

Cinque Terre

0

ಸಂಬಂಧಿತ ಸುದ್ದಿ