ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಕುಲಪತಿಯಾಗಿ ಮೇಜರ್ ಜನರಲ್ ಮ್ಯಾಥ್ಯೂಸ್ ಜೇಕಬ್ ನೇಮಕ

ಮಣಿಪಾಲ: ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ವಿಶ್ವವಿದ್ಯಾಲಯ ತನ್ನ ಆರೋಗ್ಯ ವಿಜ್ಞಾನ ವಿಭಾಗದ ನೂತನ ಸಹ ಕುಲಪತಿಯಾಗಿ ಮೇಜರ್ ಜನರಲ್ (ಡಾ.) ಮ್ಯಾಥ್ಯೂಸ್ ಜೇಕಬ್, ವಿಎಸ್‌ಎಂ (ನಿವೃತ್ತ) ಅವರನ್ನು ನೇಮಕ ಮಾಡಿದೆ.

ಮ್ಯಾಥ್ಯೂಸ್ ಜೇಕಬ್ ಅವರು ಸಶಸ್ತ್ರ ಪಡೆಗಳ ವೈದ್ಯಕೀಯ ಸೇವೆಗಳಲ್ಲಿ 36 ವರ್ಷಗಳ ಸುದೀರ್ಘ ಹಾಗೂ ವಿಶಿಷ್ಟ ಸೇವಾ ಅನುಭವ ಹೊಂದಿದ್ದಾರೆ. ಕ್ಲಿನಿಕಲ್ ಕೇರ್, ವೈದ್ಯಕೀಯ ಶಿಕ್ಷಣ, ಸಂಶೋಧನೆ, ಆರೋಗ್ಯ ರಕ್ಷಣಾ ನಾಯಕತ್ವ ಮತ್ತು ಸಾಂಸ್ಥಿಕ ಆಡಳಿತದಲ್ಲಿ ಅಪಾರ ಪರಿಣತಿಯನ್ನು ಹೊಂದಿದ್ದಾರೆ. ಪ್ರಸಿದ್ಧ ಅರಿವಳಿಕೆ ಮತ್ತು ಕ್ರಿಟಿಕಲ್ ಕೇರ್ ತಜ್ಞರಾಗಿರುವ ಇವರು, ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಯಲ್ಲಿ ಹೊಸ ಆವಿಷ್ಕಾರಗಳನ್ನು ತರುವ ಜೊತೆಗೆ, ರೋಗಿಗಳ ಆರೈಕೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಶ್ರಮಿಸಿದ್ದಾರೆ.

ಅವರು ಪುಣೆಯ ಪ್ರತಿಷ್ಠಿತ ಸಶಸ್ತ್ರ ಪಡೆಗಳ ವೈದ್ಯಕೀಯ ಕಾಲೇಜಿನಿಂದ ಎಂಬಿಬಿಎಸ್ ಮತ್ತು ಅರಿವಳಿಕೆ ಹಾಗೂ ಕ್ರಿಟಿಕಲ್ ಕೇರ್‌ನಲ್ಲಿ ಎಂಡಿ ಪದವಿ ಪಡೆದಿದ್ದಾರೆ. ಜತೆಗೆ ಡಿಎನ್‌ಬಿ ಮತ್ತು ನ್ಯಾಷನಲ್ ಅಕಾಡೆಮಿ ಆಫ್ ಮೆಡಿಕಲ್ ಸೈನ್ಸಸ್‌ನ ಸದಸ್ಯತ್ವವನ್ನು ಹೊಂದಿದ್ದಾರೆ. ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್‌ನಿಂದ ಆಸ್ಪತ್ರೆ ಆಡಳಿತದಲ್ಲಿ ಎಕ್ಸಿಕ್ಯೂಟಿವ್ ಸ್ನಾತಕೋತ್ತರ ಡಿಪ್ಲೊಮಾ, ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಿಂದ ಮೆಡಿಕಲ್ ಲಾ ಮತ್ತು ಎಥಿಕ್ಸ್‌ನಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಪಡೆದಿದ್ದಾರೆ. ಅಷ್ಟೇ ಅಲ್ಲದೆ, ಅಮೆರಿಕನ್‌ ಕಾಲೇಜ್ ಆಫ್ ಎಮರ್ಜೆನ್ಸಿ ಮೆಡಿಸಿನ್ ಎಕ್ಸ್‌ಪರ್ಟ್ಸ್ ಫೆಲೋಶಿಪ್, ವೃದ್ಧಾಪ್ಯ ವೈದ್ಯಕೀಯದಲ್ಲಿ ಪ್ರಮಾಣಪತ್ರ ಮತ್ತು ಕಾರ್ಯತಂತ್ರದ ರಕ್ಷಣಾ ನಿರ್ವಹಣೆಯಲ್ಲಿ ತರಬೇತಿಯನ್ನು ಪಡೆದು ತಮ್ಮ ಜ್ಞಾನದ ಹರವನ್ನು ವಿಸ್ತರಿಸಿಕೊಂಡಿದ್ದಾರೆ.

Edited By : Nagaraj Tulugeri
PublicNext

PublicNext

18/06/2026 08:18 pm

Cinque Terre

11.65 K

Cinque Terre

0

ಸಂಬಂಧಿತ ಸುದ್ದಿ