ನವಲಗುಂದ: ಪಟ್ಟಣದ ಬಸ್ತಿ ಪ್ಲಾಟ್ ನಲ್ಲಿರುವ ವಿದ್ಯಾಜ್ಯೋತಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಯೋರ್ವ ಶಾಲೆ ಕಟ್ಟಡದ ಮೇಲಿಂದ ಬಿದ್ದು ಸಾವನ್ನಪ್ಪಿದ ಘಟನೆ ಜರುಗಿದೆ.
ಹೌದು...ಮೂಲತಃ ತಾಲೂಕಿನ ಶಾನವಾಡ ಗ್ರಾಮದ ಆಕಾಶ ವಸಂತ ನೀಲಣ್ಣವರ (10 ವರ್ಷ) ಎಂಬ ವಿದ್ಯಾರ್ಥಿ ಈ ಶಾಲೆಯಲ್ಲಿ 4 ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಶಾಲಾ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ್ದಾನೆ.
ಇನ್ನೂ ಆತ ಕಟ್ಟಡದಿಂದ ಬೀಳಲು ಕಾರಣ ಏನೆಂದು ತಿಳಿದುಬಂದಿಲ್ಲ. ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಪಿಎಸ್ಐ ಜನಾರ್ಧನ ಭಟ್ರಳ್ಳಿ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಶಂಕರಯ್ಯ ಸುಭೇದಾರಮಠ, ಪಬ್ಲಿಕ್ ನೆಕ್ಸ್ಟ್ ನವಲಗುಂದ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
18/06/2026 09:06 pm
LOADING...