ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಅತಿವೃಷ್ಟಿ ಮತ್ತು ಅನಾವೃಷ್ಟಿ ಕುರಿತು ಮುಂಜಾಗೃತ ಕ್ರಮ ವಹಿಸಿ : ತಹಶೀಲ್ದಾರ್ ಹನುಮಂತ್ ಶಿರಹಟ್ಟಿ

ಬೆಳಗಾವಿ: ತಾಲ್ಲೂಕಿನಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವಂತೆ ಆಡಳಿತಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ತಹಶಿಲ್ದಾರರಾದ ಹನುಮಂತ್ ಶಿರಹಟ್ಟಿ ಸೂಚನೆ ನೀಡಿದರು.

ಸ್ಥಳೀಯ ರೈತ ತರಬೇತಿ ಕೇಂದ್ರದಲ್ಲಿ ರಂದು ನಡೆದ ವಿಪತ್ತು ನಿರ್ವಹಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಗ್ರಾಮೀಣ ಮಟ್ಟದಲ್ಲಿ ವ್ಯಾಪಕ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಜಿಂಗಲ್ಸ್ ಹಾಗೂ ಸಾರ್ವಜನಿಕ ಪ್ರಚಾರ ಕಾರ್ಯಕ್ರಮಗಳ ಮೂಲಕ ಮತದಾರರ ನೋಂದಣಿ ಮತ್ತು ತಿದ್ದುಪಡಿ ಕುರಿತು ಮಾಹಿತಿ ನೀಡುವಂತೆ ಸೂಚಿಸಿದರು.

ಇದಲ್ಲದೆ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿರುವ ಕೆರೆಗಳು ಮತ್ತು ಇತರ ಸಾರ್ವಜನಿಕ ಆಸ್ತಿಗಳ ಮೇಲೆ ಯಾವುದೇ ಒತ್ತುವರಿ ಆಗದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಸರ್ವೇ ಇಲಾಖೆಯ ಮೂಲಕ ಅಳತೆ ಕಾರ್ಯ ನಡೆಸಿ, ಸಂಬಂಧಿತ ದಾಖಲೆಗಳನ್ನು ನವೀಕರಿಸಿ ಸೂಕ್ತ ದಾಖಲಾತಿಗಳನ್ನು ನಿರ್ವಹಿಸುವಂತೆ ತಿಳಿಸಿದರು.

ಕಾರ್ಯನಿರ್ವಾಹಕ ಅಧಿಕಾರಿಗಳಾದ ಯಶವಂತಕುಮಾರ್ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಗುಣಮಟ್ಟವನ್ನು ಖಚಿತಪಡಿಸಿಕೊಳ್ಳಲು ನಿಯಮಿತವಾಗಿ ನೀರಿನ ಪರೀಕ್ಷೆಗಳನ್ನು ನಡೆಸಬೇಕು ಎಂದರು. ನೀರನ್ನು ಕುದಿಸಿ ಆರಿಸಿ ಕುಡಿಯುವ ಕುರಿತು ಜಿಂಗಲ್ಸ್, ಆಡಿಯೋ ಸಂದೇಶಗಳು ಹಾಗೂ ಇತರ ಜಾಗೃತಿ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಬರಗಾಲದ ಪರಿಸ್ಥಿತಿ ಎದುರಾದಲ್ಲಿ ಗ್ರಾಮೀಣ ಜನರಿಗೆ ಉದ್ಯೋಗ ಖಾತರಿ ಯೋಜನೆಯಡಿ ನಿರಂತರ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಪಿಡಿಒಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಉಪನಿರ್ದೇಶಕರಾದ ಸಲೀಮ್ ಸಂಗತ್ರಾಸ್ ಆಡಳಿತಾಧಿಕಾರಿಗಳು, ಪಿಡಿಒಗಳು, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

Edited By : Abhishek Kamoji
Kshetra Samachara

Kshetra Samachara

18/06/2026 09:15 pm

Cinque Terre

3.1 K

Cinque Terre

0

ಸಂಬಂಧಿತ ಸುದ್ದಿ