ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಜಿಲ್ಲಾಸ್ಪತ್ರೆಯಲ್ಲಿ MRI ಯಂತ್ರದ ಕೊರತೆ - ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಕಿಸಾನ್ ಸಂಘ!

ಚಿಕ್ಕಮಗಳೂರು: ಕಾಫಿನಾಡಿನ ಜಿಲ್ಲಾ ಆಸ್ಪತ್ರೆಯಲ್ಲಿ ಕಳೆದ ಎರಡು ವರ್ಷಗಳಿಂದ ರೋಗಿಗಳು ಅನುಭವಿಸುತ್ತಿರುವ ನೋವು ಮತ್ತು ಅಲ್ಲಿನ ಸಮಸ್ಯೆಗಳನ್ನು ಖಂಡಿಸಿ ಭಾರತೀಯ ಕಿಸಾನ್ ಸಂಘ ಹಾಗೂ ಮಯೂರ ಯುವ ಸೇನೆ ಜಂಟಿಯಾಗಿ ಅಸಮಾಧಾನ ವ್ಯಕ್ತಪಡಿಸಿವೆ.

ಜಿಲ್ಲಾಸ್ಪತ್ರೆಯಲ್ಲಿ ಸಿಬ್ಬಂದಿಯ ಕೊರತೆ ಹಾಗೂ ಅತ್ಯಗತ್ಯವಾಗಿ ಬೇಕಾಗಿರುವ ಎಂ.ಆರ್.ಐ ಸ್ಕ್ಯಾನಿಂಗ್ ಮಿಷನ್ ಇಲ್ಲದಿರುವುದರಿಂದ ಸಂಘಟನೆಯ ಪದಾಧಿಕಾರಿಗಳು ಈಗಾಗಲೇ ಪ್ರತಿಭಟನೆ ನಡೆಸಿದ್ದು ಜಿಲ್ಲಾ ಶಸ್ತ್ರಚಿಕಿತ್ಸಕರನ್ನು ಭೇಟಿ ಮಾಡಿ ಚರ್ಚಿಸಿದಾಗ, ಎಂ.ಆರ್.ಐ ಯಂತ್ರ ಅಳವಡಿಕೆಗೆ ಬೇಕಾದ ಸ್ಥಳ ಹಾಗೂ ಅಳತೆಯನ್ನು ಈಗಾಗಲೇ ಸರಕಾರಕ್ಕೆ ನೀಡಲಾಗಿದೆ ಎಂದು ಅವರು ತಿಳಿಸಿದ್ದರೂ ಸಹ, ಮಲೆನಾಡಿನ ಭಾಗವಾದ ಜಿಲ್ಲಾ ಕೇಂದ್ರದಲ್ಲಿ ಈ ವ್ಯವಸ್ಥೆ ಕಲ್ಪಿಸುವಲ್ಲಿ ಸರಕಾರ ಮಲತಾಯಿ ಧೋರಣೆ ತೋರುತ್ತಿದೆ ಎಂದು ದೂರಿದ್ದಾರೆ. ಪಕ್ಕದ ಜಿಲ್ಲೆಗಳಲ್ಲಿ ಈ ಎಲ್ಲಾ ಸೌಲಭ್ಯಗಳಿದ್ದರೂ, ಚಿಕ್ಕಮಗಳೂರಿನ ಜನರಿಗೆ ಕನಿಷ್ಠ ಮೂಲಸೌಕರ್ಯಕ್ಕಾಗಿ ಇಷ್ಟೊಂದು ವರ್ಷ ಕಾಯಿಸುತ್ತಿರುವುದು ವಿಪರ್ಯಾಸದ ಸಂಗತಿ ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಮುಂಬರುವ ದಿನಗಳಲ್ಲಿ ಮತ್ತೊಮ್ಮೆ ಹೋರಾಟ ಮಾಡಲು ನಿರ್ಧರಿಸುವ ಎಚ್ಚರಿಕೆ ನೀಡಿದ್ದಾರೆ.

Edited By : Vinayak Patil
PublicNext

PublicNext

18/06/2026 09:58 pm

Cinque Terre

13.68 K

Cinque Terre

0

ಸಂಬಂಧಿತ ಸುದ್ದಿ