ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

​ಹೊಸಪೇಟೆ: ನೀಟ್ ಹಗರಣ ಖಂಡಿಸಿ ಎನ್‌ಟಿಎ ವಿರುದ್ಧ ಆಕ್ರೋಶ; ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ 'ಎಐಡಿಎಸ್ಒ' ಆಗ್ರಹ

​ಹೊಸಪೇಟೆ: ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ನೈತಿಕ ಹೊಣೆ ಹೊತ್ತು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ, ಹೊಸಪೇಟೆಯ ತಾಲೂಕು ಕಚೇರಿ ಮುಂಭಾಗ AIDSO (ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್) ವಿದ್ಯಾರ್ಥಿ ಸಂಘಟನೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯ ನಂತರ ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.

​ಈ ವೇಳೆ ಮಾತನಾಡಿದ AIDSO ಜಿಲ್ಲಾಧ್ಯಕ್ಷ ರವಿಕಿರಣ್, "ಸರ್ಕಾರದ ಉದಾಸೀನತೆ ಹಾಗೂ ನಿರ್ಲಕ್ಷ್ಯದಿಂದಾಗಿ ದೇಶದ ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿರುವ ಬರೋಬ್ಬರಿ 23 ಲಕ್ಷ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ನಿರ್ಣಾಯಕ ಪರೀಕ್ಷೆಯನ್ನು ಮತ್ತೊಮ್ಮೆ ಬರೆಯುವಂತಾಗಿದೆ. ಪರೀಕ್ಷೆಗೂ ಮುನ್ನವೇ ಟೆಲಿಗ್ರಾಂ ಗ್ರೂಪ್‌ಗಳಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಗಂಭೀರ ಆರೋಪಗಳು ಕೇಳಿಬಂದರೂ ಎನ್‌ಟಿಎ (NTA) ಪರೀಕ್ಷೆ ನಡೆಸಿತು. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಕುರಿತು ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾದರೂ, ಶಿಕ್ಷಣ ಸಚಿವರಾಗಲಿ ಅಥವಾ ಎನ್‌ಟಿಎ ಆಗಲಿ ತಮಗೂ ಇದಕ್ಕೂ ಸಂಬಂಧವೇ ಇಲ್ಲದಂತೆ ಜಾರಿಕೊಂಡವು. ಹಾಗಾಗಿ, ಈ ಇಡೀ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು" ಎಂದು ಒತ್ತಾಯಿಸಿದರು.

Edited By : Manjunath H D
PublicNext

PublicNext

18/06/2026 10:18 pm

Cinque Terre

19.8 K

Cinque Terre

0

ಸಂಬಂಧಿತ ಸುದ್ದಿ