ಕಡೂರು: ಸಿಂಗಟಗೆರೆ ನಾಡಕಚೇರಿ ಮುಂದೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಸಿಂಗಟಗೆರೆ ನಾಡಕಚೇರಿ ಕಡೆಗೆ ವಿಜಯ್ ಕುಮಾರ್ ಮತ್ತು ಅವರ ತಂದೆ ನಾಗರಾಜು ಬೈಕಿನಲ್ಲಿ ಹೋಗುತ್ತಿದ್ದಾಗ, ಹಿಂಬದಿಯಿಂದ ಅತಿವೇಗವಾಗಿ ಬಂದ ರೆನಾಲ್ಟ್ ಕ್ವಿಡ್ ಕಾರಿನ ಚಾಲಕ ಕಲ್ಲೇಶ ಬೈಕಿಗೆ ಡಿಕ್ಕಿ ಹೊಡೆದಿದ್ದಾರೆ.
ಡಿಕ್ಕಿಯ ರಭಸಕ್ಕೆ ಬೈಕ್ ಸವಾರರು ಎದುರುಗಡೆ ರಸ್ತೆಯಲ್ಲಿ ಹೋಗುತ್ತಿದ್ದ ಹನುಮಂತಪ್ಪ ಎಂಬುವವರ ಮೇಲೆ ಬಿದ್ದ ಪರಿಣಾಮ ಮೂವರಿಗೂ ತೀವ್ರ ಒಳಪೆಟ್ಟು ಮತ್ತು ರಕ್ತಗಾಯಗಳಾಗಿವೆ. ಅಪಘಾತದಲ್ಲಿ ಬೈಕ್ ಮತ್ತು ಕಾರು ಜಖಂಗೊಂಡಿದ್ದು, ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳು ಹಾಸನ ಮತ್ತು ಚಿಕ್ಕಮಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Kshetra Samachara
18/06/2026 10:35 pm
LOADING...