ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಚಿನ್ನದ ಪದಕ ಪಡೆದ ಭ್ರಷ್ಟ ಪಿಎಸ್ಐ

ಕಲಬುರಗಿ: ಲಂಚ ಸ್ವೀಕರಿಸುತ್ತಿದ್ದ ಯಡ್ರಾಮಿ ಪೊಲೀಸ್ ಠಾಣೆ ಪಿಎಸ್ಐ ಮುದರೆಡ್ಡಿ, ಹಾಗೂ ಸಿಬ್ಬಂದಿ ಸಿದ್ದಣ್ಣ ಬಿರಾದಾರ್ ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ನಿನ್ನೆ ರಾತ್ರಿ ನಡೆದಿದೆ.

ಅಕ್ಕಿ ವ್ಯಾಪಾರಕ್ಕೆ ಸಂಬಂಧಿಸಿದಂತೆ ಸಹಕಾರ ನೀಡುವುದಾಗಿ ಆನಂದ್ ಕುಸ್ತಿ ಎಂಬುವವರಿಗೆ ಹಣದ ಬೇಡಿಕೆ ಇಡಲಾಗಿತ್ತು. ಇದೆ ತಿಂಗಳ 12ನೇ ತಾರೀಖಿನಂದು, ಫೋನ್ ಪೇ ಮೂಲಕ ಇಪ್ಪತ್ತು ಸಾವಿರ ರೂಪಾಯಿಗಳನ್ನು ಪಡೆಯಲಾಗಿತ್ತು. ಮತ್ತೆ ಮೂವತ್ತು ಸಾವಿರ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದು. ಅದರಲ್ಲಿ 20 ಸಾವಿರ ರೂಪಾಯಿಗಳನ್ನು ಯಡ್ರಾಮಿ ಪೊಲೀಸ್ ಠಾಣೆಯ ಆವರಣದಲ್ಲಿ ಪಡೆಯುವಾಗ ಲೋಕಾಯುಕ್ತರು ದಾಳಿ ಮಾಡಿ ಇಬ್ಬರನ್ನೂ ಬಂಧಿಸಲಾಗಿದೆ.

ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಅರುಣ್‌ ಮರಗುಂಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದೆ.

ವಿಚಿತ್ರ ಸಂಗತಿಯೆಂದರೆ, ಗಂಭೀರ ಪ್ರಕರಣಗಳಲ್ಲಿ ಹಾಗೂ ಆರೋಪಿಗಳ ಬಂಧನದಲ್ಲಿ ತೋರಿದ ಕಾರ್ಯಕ್ಷಮತೆಗಾಗಿ ಪಿಎಸ್‌ಐ ವಿಶ್ವನಾಥ ಮುದರೆಡ್ಡಿ ಅವರು 2024-25ನೇ ಸಾಲಿನಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಿನ್ನದ ಪದಕವನ್ನು ಪಡೆದಿದ್ದರು.

ಬಂಧಿತ ಆರೋಪಿಗಳನ್ನು ಕಲಬುರಗಿ ನಗರದ ಐವಾನ್ ಶಾಹಿ ಅತಿಥಿಗೃಹದ ಆವರಣದಲ್ಲಿರುವ ಲೋಕಾಯುಕ್ತರ ಕಚೇರಿಗೆ ಕರೆತಂದು ಹೆಚ್ಚಿನ ವಿಚಾರಣೆಗೆ ನಡೆಸಲಾಗುತ್ತಿದೆ.

Edited By :
PublicNext

PublicNext

19/06/2026 08:19 am

Cinque Terre

18.03 K

Cinque Terre

0