ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ : ಅಪ್ರಾಪ್ತ ಬಾಲಕಿ ಗರ್ಭಿಣಿ : ಚಿತ್ರಕಲೆಗಾರ ಯುವಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಶಿಡ್ಲಘಟ್ಟ: ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ತಾಲೂಕಿನ ಗಾಂಡ್ಲಚಿಂತೆ ಗ್ರಾಮದ 14 ವರ್ಷದ ವಿದ್ಯಾರ್ಥಿನಿ ಗರ್ಭಿಣಿಯಾಗಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ವಿದ್ಯಾರ್ಥಿನಿ ಚಿಂತಾಮಣಿ ತಾಲ್ಲೂಕಿನ ಗಡಿಗವಾರಹಳ್ಳಿ ಗ್ರಾಮದ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಪ್ರಾಥಮಿಕ ತನಿಖೆಯಲ್ಲಿ ಗಾಂಡ್ಲಚಿಂತೆ ಗ್ರಾಮದ ಚಿತ್ರಕಲೆಗಾರ ಚಂದ್ರಶೇಖರ್ ಎಂಬಾತನಿಂದ ಬಾಲಕಿ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಬಾಲಕಿಯ ಆರೋಗ್ಯ ಪರೀಕ್ಷೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸಲಾಗಿದ್ದು, ಗರ್ಭಿಣಿಯಾಗಿರುವುದು ಖಚಿತವಾದ ಹಿನ್ನೆಲೆಯಲ್ಲಿ ಆಕೆಯನ್ನು ಸುರಕ್ಷಿತವಾಗಿ ಬಾಲಕಿಯರ ಬಾಲಮಂದಿರಕ್ಕೆ ಸ್ಥಳಾಂತರಿಸಲಾಗಿದೆ.

ಪ್ರಕರಣ ಸಂಬಂಧ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯಾದ ಚಂದ್ರಶೇಖರ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶಿಡ್ಲಘಟ್ಟ ಆರಕ್ಷಕ ವೃತ್ತ ನಿರೀಕ್ಷಕ ಆನಂದ್ ಕುಮಾರ್ ಜೆ. ಅವರ ಮಾರ್ಗದರ್ಶನದಲ್ಲಿ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ನಾಗರಾಜ್ ಹಾಗೂ ಸಿಬ್ಬಂದಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಚಿಕ್ಕತೇಕಹಳ್ಳಿ ಡಿ ಶಿವಕುಮಾರ್ ಪಬ್ಲಿಕ್ ನೆಕ್ಸ್ಟ್ ಚಿಕ್ಕಬಳ್ಳಾಪುರ

Edited By :
PublicNext

PublicNext

19/06/2026 08:43 am

Cinque Terre

13.01 K

Cinque Terre

0

ಸಂಬಂಧಿತ ಸುದ್ದಿ