ನವದೆಹಲಿ: NEET-UG 2026 ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಸಾಮಾಜಿಕ ಜಾಲತಾಣವನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಟೆಲಿಗ್ರಾಂ ಹೈಕೋರ್ಟ್ ಮೆಟ್ಟಿಲೇರಿತ್ತಾದರೂ, ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿದೆ.
ನ್ಯಾಯಮೂರ್ತಿ ತೇಜಸ್ ಕರಿಯಾ ಅವರಿದ್ದ ಏಕ ಸದಸ್ಯ ಪೀಠ ಜೂನ್ 18 ರಂದು ಟೆಲಿಗ್ರಾಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿತ್ತು. ಕೇಂದ್ರ ಸರ್ಕಾರದ ಕ್ರಮವು ಕನಿಷ್ಠ ನಿರ್ಬಂಧವಾಗಿದ್ದು, ಈ ಆದೇಶ ಅಸಮಾನವಾಗಿದೆ ಎನ್ನಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತನ್ನ ಅಭಿಪ್ರಾಯಪಟ್ಟಿದೆ.
ಜೂನ್ 21 ರಂದು ನಡೆಯಲಿರುವ ನೀಟ್ ಮರುಪರೀಕ್ಷೆಗೆ ಮುನ್ನ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಜೂನ್ 22 ರವರೆಗೆ ಭಾರತದಲ್ಲಿ ಟೆಲಿಗ್ರಾಂ ಆ್ಯಪ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಈ ತಾತ್ಕಾಲಿಕ ನಿಷೇಧಕ್ಕೆ ಶಿಫಾರಸು ಮಾಡಿತ್ತು. ಇದರ ಜೊತೆಗೆ, ಜೂನ್ 30 ರವರೆಗೆ ಈ ಹಿಂದೆ ಪೋಸ್ಟ್ ಮಾಡಿದ ಸಂದೇಶಗಳಿಗೆ ಎಡಿಟ್ ಮಾಡುವ ಸೌಲಭ್ಯವನ್ನು ನಿಷ್ಕ್ರಿಯಗೊಳಿಸುವಂತೆ ಟೆಲಿಗ್ರಾಂ ವೇದಿಕೆಗೆ ಸೂಚಿಸಲಾಗಿದೆ.
PublicNext
19/06/2026 11:52 am
LOADING...