ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳದಲ್ಲಿ ಭೀಕರ ಅಪಘಾತ: ರಿಕ್ಷಾ ನಜ್ಜುಗುಜ್ಜು, ಚಾಲಕನ ಸ್ಥಿತಿ ಗಂಭೀರ!

ಕಾರ್ಕಳ: ಜೂನ್ 19ರ ಬೆಳಿಗ್ಗೆ ಮಿಯ್ಯಾರು ಜೋಡುಕಟ್ಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ಮತ್ತು ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದೆ. ಈ ಘಟನೆಯಲ್ಲಿ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಜಗೋಳಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಖಾಸಗಿ ಬಸ್, ಅದೇ ರಸ್ತೆಯಲ್ಲಿ ಮುಂಭಾಗದಿಂದ ಬರುತ್ತಿದ್ದ ರಿಕ್ಷಾಕ್ಕೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ರಿಕ್ಷಾ ಸಂಪೂರ್ಣವಾಗಿ ಜಖಂಗೊಂಡಿದ್ದು, ಬಸ್‌ನ ಮುಂಭಾಗಕ್ಕೂ ಹಾನಿಯಾಗಿದೆ.

ಗಾಯಗೊಂಡ ರಿಕ್ಷಾ ಚಾಲಕ ಚಂದ್ರಕಾಂತ್ ಶೆಣೈ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರ ಪ್ರಕಾರ, ಈ ರಸ್ತೆಯಲ್ಲಿನ ಅವೈಜ್ಞಾನಿಕ ತಿರುವುಗಳೇ ಪದೇ ಪದೇ ಅಪಘಾತಗಳಿಗೆ ಕಾರಣವಾಗುತ್ತಿವೆ ಎಂದು ಆರೋಪಿಸಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ವರದಿ: ಮಂಜು ಶೆಟ್ಟಿ ಸಾಣೂರು, ಪಬ್ಲಿಕ್ ನೆಕ್ಸ್ಟ್ ಕಾರ್ಕಳ

Edited By :
Kshetra Samachara

Kshetra Samachara

19/06/2026 01:16 pm

Cinque Terre

676

Cinque Terre

0

ಸಂಬಂಧಿತ ಸುದ್ದಿ