ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಕಲಿ ದಾಖಲೆ ಸೃಷ್ಟಿಸಿ ನಕಲಿ ವ್ಯಕ್ತಿಯನ್ನು ಜಾಮೀನುದಾರನಾಗಿಸಿ ನ್ಯಾಯಾಲಯಕ್ಕೆ ವಂಚನೆ: ಇಬ್ಬರ ಬಂಧನ

ಬೆಳಗಾವಿ : ನಕಲಿ ಆಧಾರ್ ಕಾರ್ಡ್ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿ, ನಕಲಿ ವ್ಯಕ್ತಿಯನ್ನು ಜಾಮೀನುದಾರನಾಗಿಸಿ ನ್ಯಾಯಾಲಯಕ್ಕೇ ವಂಚಿಸಿರುವ ಆರೋಪದ ಮೇಲೆ ಇಬ್ಬರನ್ನು ಬೆಳಗಾವಿಯ ಮಾರ್ಕೇಟ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇಲ್ಲಿನ ಉಜ್ವಲ ನಗರದ 2ನೇ ಕ್ರಾಸ್ ನಿವಾಸಿ ಇಮ್ರಾನ್ ಅಬ್ದುಲ್ ಮಿಶ್ರಿಕೋಟೆ (48) ಹಾಗೂ ಗಣೇಶಪುರದ ಜ್ಯೋತಿ ನಗರದ ಅವಿನಾಶ್ ಪಾಂಡುರಂಗ ಲಾಕೆ (39) ಬಂಧಿತರು.

ಬಂಧಿತರಿಂದ ನಕಲಿ ಆಧಾರ್ ಕಾರ್ಡ್ ಹಾಗೂ ದಾಖಲೆಗಳನ್ನು ತಯಾರಿಸಲು ಬಳಸಲಾಗುತ್ತಿದ್ದ ಕಂಪ್ಯೂಟರ್, ಅದರ ಬಿಡಿಭಾಗಗಳು ಸೇರಿದಂತೆ ವಿವಿಧ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

ಈ ಕುರಿತು ಮಾರ್ಕೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯ ವೇಳೆ ಆರೋಪಿಗಳ ಪಾತ್ರ ದೃಢಪಟ್ಟ ಹಿನ್ನೆಲೆಯಲ್ಲಿ ಮಾರ್ಕೇಟ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ಹಾಗೂ ಪಿಎಸ್ಐ ಹುಸೇನಸಾಬ ಕೆರೂರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Edited By : Nirmala Aralikatti
PublicNext

PublicNext

19/06/2026 01:53 pm

Cinque Terre

5.21 K

Cinque Terre

0

ಸಂಬಂಧಿತ ಸುದ್ದಿ