ತುಮಕೂರು: ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಗೂಳೂರು ಹೋಬಳಿಯ ದೊಡ್ಡಸಾರಂಗಿಪಾಳ್ಯ ಗ್ರಾಮದಲ್ಲಿ ಬುಧವಾರ ಶಾಸಕ ಬಿ. ಸುರೇಶ್‌ಗೌಡರು ತುಮಕೂರು ನಗರಾಭಿವೃದ್ಧಿ ಇಲಾಖೆಯಿಂದ ಅಂದಾಜು ಮೊತ್ತ 21 ಲಕ್ಷ ರೂ. ಗಳ ಅನುದಾನದಲ್ಲಿ ಸಿ.ಸಿ ರಸ್ತೆ ಹಾಗೂ ಸಿ.ಸಿ ಚರಂಡಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಇದೇ ವೇಳೆ ಶಾಸಕರು, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯಿಂದ ಅಂದಾಜು ಮೊತ್ತ 1.31 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ ಮನೆ ಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಕಾಮಗಾರಿಯ ಭೂಮಿ ಪೂಜೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗೂಳೂರು ಶಿವಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ನರಸಿಂಹಮೂರ್ತಿ, ಹೆತ್ತೇನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೊಡ್ಡಸಾರಂಗಿ ಶಂಕರಣ್ಣ, ಮುಖಂಡರಾದ ಜಯಂತ್ ಗೌಡ, ರಮೇಶ್, ಮಂಜುಳಾ, ವೀರಭದ್ರಸ್ವಾಮಿ, ನಟರಾಜ್, ಗಂಗಣ್ಣ, ಮಂಜುಳಾ, ಉಮಾಶಂಕರ್, ಗೋಪಿ, ಗುತ್ತಿಗೆದಾರರಾದ, ಚರಣ್, ಮಹದೇವಣ್ಣ ಚಿಕ್ಕಹನುಮಂತಯ್ಯ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಹಾಜರಿದ್ದರು.
PublicNext
19/06/2026 02:07 pm
LOADING...