ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದಾಪುರದಲ್ಲಿ ಪೊಲೀಸ್ ವ್ಯವಸ್ಥೆ ವಿರೋಧಿಸಿ ಬೃಹತ್ ಪ್ರತಿಭಟನೆ

ಸಿದ್ದಾಪುರ: ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ತಡೆಯುವಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ, ಸಾರ್ವಜನಿಕರು ಠಾಣೆಗೆ ಬಂದು ಮಾಹಿತಿ ನೀಡಿದರು ಅಧಿಕಾರಿಗಳು ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿರುವುದು ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಲು ಕಾರಣವಾದ ಅಧಿಕಾರಿಗಳನ್ನು ಅಮಾನತು ಮಾಡಿ ವರ್ಗಾವಣೆಗೊಳಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ವಸಂತ ನಾಯ್ಕ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಪಟ್ಟಣದ ರಾಮಕೃಷ್ಣ ಹೆಗಡೆ ಸರ್ಕಲ್ ನಿಂದ ಹೊರಟ ಪ್ರತಿಭಟನಾಕಾರರು ರಾಜಮಾರ್ಗದಲ್ಲಿ ಸಾಗಿ ತಹಶೀಲ್ದಾರ್ ಕಚೇರಿ ತಲುಪಿದರು ಅಲ್ಲಿ ಪ್ರತಿಭಟನೆ ಸಭೆ ನಡೆಸಿ ತಾಲೂಕಿನಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿಕೊಂಡ ಸಿರ್ಸಿ ವಿಭಾಗದ ಡಿವೈಎಸ್ಪಿ ಗೀತಾ ಪಾಟೀಲ್ ಹಾಗೂ ಸಿದ್ದಾಪುರ ಠಾಣೆ ಇನ್ಸ್ಪೆಕ್ಟರ್ ಸೀತಾರಾಮ್ ಅವರನ್ನು ಕೂಡಲೇ ಅಮಾನತುಗೊಳಿಸಿ ವರ್ಗಾವಣೆಗೊಳಿಸಬೇಕು ಇನ್ನು 15 ದಿನದಲ್ಲಿ ಕ್ರಮವಾಗದಿದ್ದರೆ ತಾಲೂಕಿನ ಜನರನ್ನು ಸೇರಿಸಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಸಂತ ನಾಯ್ಕ್ ಎಚ್ಚರಿಕೆ ನೀಡಿದರು.

ಸಾಗರದ ಖ್ಯಾತ ವಕೀಲ ಭೋಜರಾಜ ಹಾಗೂ ಎಂ ಎನ್ ನಾಯ್ಕ್ ಸಿರ್ಸಿ, ಪ್ರಮುಖರಾದ ವಿನಾಯಕ ದೊಡಗದ್ದೆ, ಪ್ರಶಾಂತ್ ಹೊಸೂರು, ಯೋಗಾನಂದ ಕಾಳೆನಳ್ಳಿ, ಅಣ್ಣಪ್ಪ ನಾಯಕ ಮತ್ತಿತರು ಮಾತನಾಡಿ ಪೊಲೀಸರ ವಿರುದ್ಧ ಆರೋಪ ಮಾಡಿ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹಿಸಿದರು.

Edited By : PublicNext Desk
PublicNext

PublicNext

19/06/2026 02:27 pm

Cinque Terre

7.25 K

Cinque Terre

0

ಸಂಬಂಧಿತ ಸುದ್ದಿ