ಚಾಮರಾಜನಗರ : ತಾಲೂಕಿನ ಹೊಂಗನೂರು ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಭೇಟಿ ನೀಡಿದರು.
ಘಟನಾ ಸ್ಥಳಕ್ಕೆ ತೆರಳಿದ ಶಾಸಕ ಎ.ಆರ್.ಕೃಷ್ಣಮೂರ್ತಿ ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡರು. ಬಳಿಕ ಅವರು ಮಾತನಾಡಿ, ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡುವಂತಹ ಘಟನೆಗಳು ಪದೇ ಪದೇ ನಡೆಯುತ್ತಿರುವುದು ಖಂಡನೀಯ. ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.
ಘಟನೆ ಕುರಿತು ಪೊಲೀಸರು ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು. ಈ ಸಂಬಂಧ ಸೂಕ್ತವಾದ ಕಾನೂನನ್ನು ಜಾರಿಗೆ ತರಬೇಕು. ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡುತ್ತೇನೆ. ಹೊಸ ಗೃಹ ಸಚಿವರ ಜೊತೆ ಚರ್ಚಿಸಿ ಹೊಸ ಕಾನೂನನ್ನು ಜಾರಿಗೆ ತರುವ ನಿಟ್ಟಿನಲ್ಲಿ ಮನವಿ ಮಾಡಲಾಗುವುದು ಎಂದರು.
Kshetra Samachara
19/06/2026 03:41 pm
LOADING...