ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೆಟ್ಟು ಹೋದ ಶುದ್ಧ ಕುಡಿಯುವ ನೀರಿನ ಘಟಕಗಳು - ಶಾಸಕರೆ ಇತ್ತ ಗಮನ ಹರಿಸಿ

ಪಬ್ಲಿಕ್ ನೆಕ್ಸ್ಟ್ ವಿಶೇಷ

ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ಇನ್ನು ಕೆಲ ದಿನಗಳಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಲಿದೆ. ಆದರೆ ಇಲ್ಲಿ ಮಾತ್ರ ಶುದ್ಧ ಕುಡಿಯುವ ನೀರಿನ ಘಟಕಗಳು ಇದ್ದರೂ ಜನರಿಗೆ ಪರದಾಡುವ ಪರಿಸ್ಥಿತಿ ತಪ್ಪಿಲ್ಲ.

ಹೌದು.. ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ ಮತಕ್ಷೇತ್ರದಲ್ಲೇ ಕುಡಿಯುವ ನೀರಿಗಾಗಿ ಜನರು ಪರದಾಟ ನಡೆಸಿದ್ದಾರೆ.‌ ಅನೇಕ ಶುದ್ಧ ಕುಡಿಯುವ ನೀರಿನ ಘಟಕಗಳು ಇದ್ದರೂ ಜನರಿಗೆ ಪರದಾಟ ತಪ್ಪುತ್ತಿಲ್ಲ.

ಜಲಜೀವನ ಮಿಷನ್ ಯೋಜನೆಯಡಿ ಲಕ್ಷಾಂತರ ರೂ ಹಣ ಖರ್ಚು ಮಾಡಿ ಕಿತ್ತೂರು ಪಟ್ಟಣದ ಅನೇಕ ಕಡೆ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಪಟ್ಟಣ ಪಂಚಾಯತಿ ಅಧಿಕಾರಿಗಳು ಸಿಬ್ಬಂದಿಗಳು ಸರಿಯಾಗಿ ನಿರ್ವಹಣೆ ಮಾಡದ ಹಿನ್ನೆಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿವೆ. ನೀರಿನ ಘಟಕಗಳು ಕೆಟ್ಟು ನಿಂತರೂ ಅಧಿಕಾರಿಗಳು ಮಾತ್ರ ಸರಿಪಡಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ.

ಸದ್ಯ ನಾಲ್ಕೈದು ತಿಂಗಳಿಂದ ಕಿತ್ತೂರು ಪಟ್ಟಣದಲ್ಲಿನ ಬಹುತೇಕ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿರುವ ಪರಿಣಾಮ ಕುಡಿಯುವ ನೀರಿಗಾಗಿ ಜನರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಅಧಿಕಾರಿಗಳ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.

ಒಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನಕ್ಕಿದ್ದರೂ ಶುದ್ಧ ನೀರಿನ ಘಟಕಗಳು ಹಳ್ಳ ಹಿಡಿದಿರುವುದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರಲ್ಹಾದ ಪೂಜಾರಿ, ಪಬ್ಲಿಕ್ ನೆಕ್ಸ್ಟ್, ಬೆಳಗಾವಿ

Edited By : Manjunath H D
PublicNext

PublicNext

19/06/2026 04:47 pm

Cinque Terre

4.85 K

Cinque Terre

0

ಸಂಬಂಧಿತ ಸುದ್ದಿ