ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕಾಗಿ ಕಾಂಗ್ರೆಸ್ ಯುವ ಮುಖಂಡ ತೇಜಸ್ ಎಂಬಾತ ಬೈಕ್ ಅಡ್ಡಗಟ್ಟಿ, ಕಾರಿನಲ್ಲಿದ್ದ ಲಾಂಗ್ ಹೊರತೆಗೆದು ಸಾರ್ವಜನಿಕ ರಸ್ತೆಯಲ್ಲೇ ದಯಾನಂದ್ ಎಂಬುವವರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಪೊಲೀಸ್ ವರಿಷ್ಠಾಧಿಕಾರಿ ದಾಯ್ಮಾ ಅವರು ಹೇಳಿಕೆ ನೀಡಿದ್ದು, ಆರೋಪಿ ತೇಜಸ್ ವೈಯಕ್ತಿಕ ದ್ವೇಷ ಹಾಗೂ ವರ್ತನೆಯ ಹಿನ್ನೆಲೆಯಲ್ಲಿ ಜಗಳವಾಡಿ, ಮಾರಕಾಸ್ತ್ರ ಹಿಡಿದುಕೊಂಡು ಬೆದರಿಕೆ ಹಾಕಿದ್ದಾನೆ ಎಂದು ದೂರು ಬಂದಿರುವುದಾಗಿ ತಿಳಿಸಿದ್ದಾರೆ.
ಈ ದೂರಿನ ಆಧಾರದ ಮೇಲೆ ದೂರುದಾರರಿಂದ ಹೇಳಿಕೆ ಪಡೆದು ಈಗಾಗಲೇ ಆಲ್ದೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ.
ಆರೋಪಿ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿಯೂ ಪ್ರಕರಣ ದಾಖಲಿಸಲಾಗಿದ್ದು, ಸದ್ಯದಲ್ಲೇ ಆತನನ್ನು ಬಂಧಿಸುವ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದೆ. ಘಟನೆಗೆ ನಿಖರವಾದ ಕಾರಣವೇನು ಎಂದು ಪ್ರಕರಣದ ಮುಂದಿನ ವಿಚಾರಣೆ ಹಾಗೂ ಆರೋಪಿಯ ಹೆಚ್ಚಿನ ಹೇಳಿಕೆಗಳ ಬಳಿಕವಷ್ಟೇ ಕೃತ್ಯದ ಹಿಂದಿರುವ ಸಂಪೂರ್ಣ ವಿಚಾರಗಳು ಹೊರಬರಲಿವೆ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.
PublicNext
19/06/2026 04:51 pm
LOADING...