ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟೆಲಿಗ್ರಾಮ್ ಆ್ಯಪ್‌ಗೆ ನಿರ್ಬಂಧ - ಕೇಂದ್ರ ಸರ್ಕಾರದ ಕ್ರಮ ಎತ್ತಿ ಹಿಡಿದ ದಿಲ್ಲಿ ಹೈಕೋರ್ಟ್

ಹೊಸದಿಲ್ಲಿ: NEET-UG ಮರುಪರೀಕ್ಷೆಗೂ ಮುನ್ನ ಕೇಂದ್ರ ಸರ್ಕಾರ ಟೆಲಿಗ್ರಾಮ್‌ಗೆ ವಿಧಿಸಿದ್ದ ತಾತ್ಕಾಲಿಕ ನಿಷೇಧವನ್ನು ದಿಲ್ಲಿ ಹೈಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ. ಮಾಹಿತಿ ತಂತ್ರಜ್ಞಾನ ಕಾಯಿದೆ-2000ರ ಸೆಕ್ಷನ್ 69A ಅಡಿಯಲ್ಲಿ ನೀಡಲಾಗಿದ್ದ ನಿರ್ಬಂಧದ ಆದೇಶವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ತೇಜಸ್ ಕರಿಯಾ ಅವರ ಪೀಠ ವಜಾಗೊಳಿಸಿದೆ. ಈ ಮೂಲಕ, ಕೇಂದ್ರ ಸರ್ಕಾರದ ನಿರ್ಧಾರಕ್ಕೆ ನ್ಯಾಯಾಲಯದ ಅನುಮೋದನೆ ದೊರೆತಂತಾಗಿದೆ.

ನಕಲಿ ಪ್ರಶ್ನೆಪತ್ರಿಕೆಗಳ ಹರಡುವಿಕೆ, ತಪ್ಪು ಮಾಹಿತಿ ಮತ್ತು ಪತ್ರಿಕೆ ಸೋರಿಕೆ ವದಂತಿಗಳನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರವು ದೇಶದಾದ್ಯಂತ ಜೂನ್ 22ರವರೆಗೆ ಟೆಲಿಗ್ರಾಮ್ ಬಳಕೆಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿತ್ತು. ಈ ಕ್ರಮವನ್ನು ಪ್ರಶ್ನಿಸಿ ಟೆಲಿಗ್ರಾಮ್ ನ್ಯಾಯಾಲಯದ ಮೊರೆ ಹೋಗಿತ್ತು. ಸರ್ಕಾರದ ಆದೇಶವು 'ಅಸಮಂಜಸ' ಅಥವಾ 'ಅತಿಯಾದ ಕ್ರಮ' ಎಂದು ಹೇಳಲು ಸಾಧ್ಯವಿಲ್ಲ ಎಂದು ತೀರ್ಪು ನೀಡುವಾಗ ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.

Edited By : Nagaraj Tulugeri
PublicNext

PublicNext

19/06/2026 05:10 pm

Cinque Terre

2.07 K

Cinque Terre

0

ಸಂಬಂಧಿತ ಸುದ್ದಿ