ಶೃಂಗೇರಿ: ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಕುಷನ್ ಅಂಗಡಿ ಮಾಲೀಕ ಸಮೀರ್ (ಶಬೀರ್) ಎಂಬಾತನನ್ನು ಗುರುವಾರ ಶೃಂಗೇರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ತನ್ನ ಅಂಗಡಿ ಬಳಿ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿ ಅಸಭ್ಯವಾಗಿ ಸ್ಪರ್ಶಿಸಿದ್ದಾನೆ ಎಂದು ಬಾಲಕಿಯ ಪೋಷಕರು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪ್ರಕರಣದ ಕುರಿತು ಮಾಹಿತಿ ನೀಡಿರುವ ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಾಯ್ಮಾ ಘಟನೆಗೆ ಸಂಬಂಧಿಸಿದಂತೆ, ಶೃಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧನ ಪ್ರಕ್ರಿಯೆಗೆ ಒಳಪಡಿಸಿದ್ದಾರೆ. ಸದ್ಯ ಬಾಲಕಿಯ ಹೇಳಿಕೆ ದಾಖಲಿಸುವುದು ಬಾಕಿ ಇದ್ದು, ಆ ಹೇಳಿಕೆಯಲ್ಲಿ ಲಭ್ಯವಾಗುವ ಹೆಚ್ಚಿನ ವಿವರಗಳು ಮತ್ತು ಘಟನೆಯ ನಿಖರ ಮಾಹಿತಿಯ ಆಧಾರದ ಮೇಲೆ ಮುಂದಿನ ತನಿಖಾ ಪ್ರಕ್ರಿಯೆಯನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
PublicNext
19/06/2026 05:40 pm
LOADING...