ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಲ್ಕಿ:ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತರಬೇಕು-ಡಾ. ವಾಸುದೇವ ಬೆಳ್ಳೆ

ಮುಲ್ಕಿ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆ ಹಾಗೂ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿ ಶಾಲೆಗೆ ಕೀರ್ತಿ ತರಬೇಕು ಎಂದು ಮುಲ್ಕಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ ಹೇಳಿದರು

ಅವರು ಸ .ಪ.ಪೂ ಕಾಲೇಜಿನ ಪ್ರೌಢಶಾಲಾ ವಿಭಾಗದ ಎಸ್.ಡಿ.ಎಂ.ಸಿ ಶಾಲಾ ಸಂಸತ್ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಕಾಲೇಜಿನ ಎಸ್ ಬಿ ಸಿ ಉಪಾಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ , ಎಸ್.ಡಿ.ಎಂ.ಸಿ ಉಪಾಧ್ಯಕ್ಷ ವೆಂಕಟೇಶ್,ಕಾರ್ನಾಡ್ ಶ್ರೀರಾಮ ಸೇವಾ ಮಂಡಳಿಯ ಅಧ್ಯಕ್ಷ ಭಾಸ್ಕರ್ ಶೆಟ್ಟಿಗಾರ್, ಶಾಲಾ ಹಿರಿಯ ಶಿಕ್ಷಕಿ ಜಯಲಕ್ಷ್ಮಿ ಟಿ ನಾಯಕ್, ಶಾಲಾ ನಾಯಕ ಮುತ್ತಪ್ಪ ಬಸಪ್ಪ ಹೊಸೂರು ಹಾಗೂ ವಿರೋಧ ಪಕ್ಷದ ನಾಯಕ ದಕ್ಷಿತ್ ಅವರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ನೂತನ ಎಸ್ ಡಿ ಎಮ್ ಸಿ ಅಧ್ಯಕ್ಷರನ್ನಾಗಿ ಶಿವಾನಂದ ಆರ್ ಕೆ ರವರನ್ನು ಆಯ್ಕೆ ಮಾಡಲಾಯಿತು ಹಾಗೂ ಈ ಹಿಂದೆ

ಎಸ್ ಡಿ ಎಂ ಸಿ ಅಧ್ಯಕ್ಷರಾಗಿದ್ದ ಹರ್ಷರಾಜ ಶೆಟ್ಟಿ ಮತ್ತು ಯೋಗಿನಿ ರವರನ್ನು ಗೌರವಿಸಲಾಯಿತು. ವಿದ್ಯಾರ್ಥಿಗಳಾದ ಸಾಕ್ಷಿ ಸ್ವಾಗತಿಸಿದರು, ಪ್ರೇಕ್ಷ ಧನ್ಯವಾದ ಅರ್ಪಿಸಿದರು,ಸಿದ್ದಣ್ಣ ಅಜ್ಜಪ್ಪ ವಗ್ಗಗೋಳ ನಿರೂಪಿಸಿದರು.

Edited By : PublicNext Desk
Kshetra Samachara

Kshetra Samachara

19/06/2026 06:02 pm

Cinque Terre

498

Cinque Terre

0

ಸಂಬಂಧಿತ ಸುದ್ದಿ