ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಸಾಮಾಜಿಕ ಜಾಲತಾಣದಲ್ಲಿ ಆಯುಧ ಪ್ರದರ್ಶಿಸಿದರೆ ಕಠಿಣ ಕ್ರಮ - ಎಸ್ಪಿ ದಾಯ್ಮಾ ವಾರ್ನಿಂಗ್

ಚಿಕ್ಕಮಗಳೂರು: ಕಾನೂನು ಉಲ್ಲಂಘಿಸಿ ಸಾರ್ವಜನಿಕ ರಸ್ತೆಯಲ್ಲಿ ವಾಹನ ನಿಲ್ಲಿಸಿ, ಲಾಂಗ್ ನಿಂದ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಯುವಕರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿ ಸಮೀರ್ ವಿರುದ್ಧ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಾಯ್ಮಾ ವೈರಲ್ ವಿಡಿಯೋದಲ್ಲಿ ಸುಮಾರು ಹತ್ತು ಜನ ಯುವಕರು ಕಾಣಿಸಿಕೊಂಡಿದ್ದು, ಇನ್ನುಳಿದ ಯುವಕರು ಅಲ್ಲಿಗೆ ಏಕೆ ಹೋಗಿದ್ದರು ಮತ್ತು ಈ ಪ್ರಕರಣದಲ್ಲಿ ಅವರ ಪಾತ್ರವೇನು ಎಂಬ ಬಗ್ಗೆ ಮುಂದಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ಕಾನೂನುಬಾಹಿರ ಆಯುಧಗಳನ್ನು ಇಟ್ಟುಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುವವರನ್ನು ಕಟ್ಟುನಿಟ್ಟಾಗಿ ಆರೋಪಿಗಳೆಂದೇ ಪರಿಗಣಿಸಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ಜೈಲಿಗೆ ಕಳುಹಿಸಲಾಗುವುದು ಎಂದು ಎಸ್ಪಿ ಎಚ್ಚರಿಕೆ ನೀಡಿದ್ದಾರೆ

Edited By : Vinayak Patil
PublicNext

PublicNext

19/06/2026 06:30 pm

Cinque Terre

5 K

Cinque Terre

0

ಸಂಬಂಧಿತ ಸುದ್ದಿ