ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜೂನ್ 21 ರಂದು ನೀಟ್ ಪರೀಕ್ಷೆ - ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಹಾಗೂ ಬಿಗಿ ಕ್ರಮ : ಪ್ರಭುಲಿಂಗ ಕವಳಿಕಟ್ಟಿ

ಶಿವಮೊಗ್ಗ : ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್-ಯುಜಿ 2026) ಯು ನಗರದಲ್ಲಿ ಜೂನ್ 21 ರಂದು ಮಧ್ಯಾಹ್ನ 02 ರಿಂದ ಸಂಜೆ 05.15 ರವರೆಗೆ ನಡೆಯಲಿದ್ದು ಪರೀಕ್ಷೆ ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ಧತೆ ಹಾಗೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.ಜಿಲ್ಲಾಡಳಿತ ಕಚೇರಿಯಲ್ಲಿ ಶುಕ್ರವಾರ ನೀಟ್(ಯುಜಿ)-2026 ಪರೀಕ್ಷೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ಶಿವಮೊಗ್ಗ ನಗರದ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಆಯೋಜಿಸಲಾಗಿದೆ. ಒಟ್ಟು 4832 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಪರೀಕ್ಷೆಯನ್ನು ಪಾರದರ್ಶಕವಾಗಿ ಮತ್ತು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತವು ಎಲ್ಲಾ ರೀತಿಯ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದರು.

Edited By : PublicNext Desk
Kshetra Samachara

Kshetra Samachara

19/06/2026 06:41 pm

Cinque Terre

640

Cinque Terre

0

ಸಂಬಂಧಿತ ಸುದ್ದಿ