ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಕಾಫಿನಾಡು ಸಜ್ಜು: ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಡಿಸಿ ಕರೆ

ಚಿಕ್ಕಮಗಳೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸಂಭ್ರಮದ ಮುನ್ನೋಟವಾಗಿ ನಗರದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅತ್ಯಾಕರ್ಷಕ 'ಯೋಗ ನಡಿಗೆ ಜಾಥಾ' ನಡೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ ಹಾಗೂ ವಿವಿಧ ಪ್ರಮುಖ ಇಲಾಖೆಗಳು ಮತ್ತು ಯೋಗ ಸಂಘ-ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಈ ಭವ್ಯ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.

'ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ' ಎಂಬ ಅರ್ಥಪೂರ್ಣ ಧ್ಯೇಯ ವಾಕ್ಯದೊಂದಿಗೆ ಸಾಗಿದ ಈ ರ‍್ಯಾಲಿಯು ಸಾರ್ವಜನಿಕರಲ್ಲಿ ಯೋಗದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.

ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ, ಭಾನುವಾರ ನಡೆಯಲಿರುವ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿತದಿಂದ ಈಗಾಗಲೇ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಹಿರಿಯ ನಾಗರಿಕರು, ಯುವಜನತೆ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಯೋಗ ದಿನಾಚರಣೆಯನ್ನು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದ್ದಾರೆ.

Edited By :
PublicNext

PublicNext

19/06/2026 06:41 pm

Cinque Terre

7.4 K

Cinque Terre

0

ಸಂಬಂಧಿತ ಸುದ್ದಿ