ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ : ನಾಗನೂರು ರುದ್ರಾಕ್ಷಿ ಮಠದಲ್ಲಿ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಬೆಳಗಾವಿ : ಬೆಳಗಾವಿಯ ಎಸ್ ಜಿ ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ದಿನಾಂಕ 21 ರಂದು ಬೆಳಗಿನ 6:00 ಗಂಟೆಗೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ಹಿಮಾಲಯನ್ ಧ್ಯಾನ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

ನಾಗನೂರು ರುದ್ರಾಕ್ಷಿ ಮಠದ ವತಿಯಿಂದ ಏರ್ಪಡಿಸಲಾಗಿರುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಮಠದ ಪೀಠಾಧಿಕಾರಿ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ವಹಿಸಿಕೊಳ್ಳಲಿದ್ದಾರೆ.

ಹಿಮಾಲಯನ್ ಯೋಗ ಸಾಧಕ ಶ್ರೀ ನಿರಂಜನ ಮಹಾಸ್ವಾಮಿಗಳು ಯೋಗ ಪ್ರಾತ್ಯಕ್ಷಿಕೆ ನೀಡಲಿದ್ದಾರೆ. ಬಸವನ ಬಾಗೇವಾಡಿಯ ಖ್ಯಾತ ವಾಗ್ಮಿ ಶ್ರೀ ಅಶೋಕ್ ಹಂಚಲಿ ಅವರು ಅತಿಥಿ ಉಪನ್ಯಾಸಕರಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಕಾರ್ಯಕ್ರಮದ ಲಾಭವನ್ನು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪಡೆದುಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

Edited By : Manjunath H D
PublicNext

PublicNext

19/06/2026 06:44 pm

Cinque Terre

7.32 K

Cinque Terre

0

ಸಂಬಂಧಿತ ಸುದ್ದಿ