ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಗ್ಯಾರಂಟಿ ಪರಿಶೀಲನಾ ಸಭೆ!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇಂದು ಅತ್ಯಂತ ಪ್ರಮುಖ ವಿದ್ಯಮಾನವೊಂದು ಜರುಗುತ್ತಿದೆ. ಉಪಮುಖ್ಯಮಂತ್ರಿಯಾಗಿದ್ದ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಭವಿಷ್ಯದ ಕುರಿತು ಹೈವೋಲ್ಟೇಜ್ ಸಭೆ ಆರಂಭವಾಗಿದೆ.

ಹೌದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಮತ್ತು ಮುಂದಿನ ನಡೆಗೆ ಸಂಬಂಧಿಸಿದಂತೆ ಸುದೀರ್ಘ ಚರ್ಚೆಗಳು ನಡೆಯುತ್ತಿವೆ. ಈ ಹೈಪ್ರೊಫೈಲ್ ಸಭೆಯಲ್ಲಿ ರಾಜ್ಯ ಸರ್ಕಾರದ ಪ್ರಮುಖ ಸಚಿವರುಗಳಾದ ಕೆ.ಹೆಚ್. ಪಾಟೀಲ್, ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್ ಹಾಗೂ ಪ್ರಿಯಾಂಕ್ ಖರ್ಗೆ ಅವರು ಭಾಗವಹಿಸಿದ್ದಾರೆ. ಇವರೊಂದಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ (CS) ಶಾಲಿನಿ ರಜನೀಶ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ.

ಯೋಜನೆಗಳ ಅರ್ಹತಾ ಮಾನದಂಡಗಳಲ್ಲಿ ಏನಾದರೂ ಬದಲಾವಣೆ ತರಬೇಕೇ? ಆರ್ಥಿಕ ಹೊರೆಯನ್ನು ಸರಿದೂಗಿಸುವುದು ಹೇಗೆ? ಮತ್ತು ಯೋಜನೆಗಳು ತಳಮಟ್ಟದ ಜನರಿಗೆ ತಲುಪುತ್ತಿರುವ ವೇಗ ಹೇಗಿದೆ ಎಂಬುದರ ಕಂಪ್ಲೀಟ್ ರಿಪೋರ್ಟ್ ಅನ್ನು ಮುಖ್ಯಮಂತ್ರಿಗಳು ಪಡೆದುಕೊಳ್ಳುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳ ಮುಂದಿನ ಹಾದಿಯನ್ನು ನಿರ್ಧರಿಸುವಲ್ಲಿ ಈ ಸಭೆ ಅತ್ಯಂತ ನಿರ್ಣಾಯಕ ಎನ್ನಲಾಗಿದೆ.

Edited By : Nagaraj Tulugeri
PublicNext

PublicNext

19/06/2026 06:51 pm

Cinque Terre

2.85 K

Cinque Terre

0

ಸಂಬಂಧಿತ ಸುದ್ದಿ