ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಿಎಂ ಸಮಾಲೋಚನೆ

ಬೆಂಗಳೂರು : ರಾಜ್ಯದ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಹತ್ವದ ಸಮಾಲೋಚನಾ ಸಭೆ ನಡೆಯಿತು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ಕರಾವಳಿ ಪ್ರವಾಸೋದ್ಯಮವನ್ನು ಇನ್ನಷ್ಟು ಆಕರ್ಷಕವಾಗಿಸಲು ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.

ಈ ಸಭೆಯಲ್ಲಿ ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್, ಖ್ಯಾತ ನಟ ರಿಷಬ್ ಶೆಟ್ಟಿ, ಶಾಸಕರಾದ ಜಿ.ಟಿ. ದೇವೇಗೌಡ ಹಾಗೂ ಸತೀಶ್ ಸೈಲ್ ಭಾಗವಹಿಸಿದ್ದರು. ಇವರೊಂದಿಗೆ, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀನಿವಾಸ್, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ತ್ರಿಲೋಕ್ ಚಂದ್ರ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Edited By : Abhishek Kamoji
PublicNext

PublicNext

19/06/2026 06:56 pm

Cinque Terre

3.69 K

Cinque Terre

0

ಸಂಬಂಧಿತ ಸುದ್ದಿ