ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಡ್ಡಮತದಾನದ ಆರೋಪಕ್ಕೆ ಶಾಸಕ ಎಚ್.ಕೆ. ಸುರೇಶ್ ಸ್ಪಷ್ಟನೆ : ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಪತ್ರ!

ಬೆಂಗಳೂರು : ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಅಡ್ಡಮತದಾನದ (Cross-voting) ಊಹಾಪೋಹಗಳಿಗೆ ಕೊನೆಗೂ ಶಾಸಕ ಎಚ್.ಕೆ. ಸುರೇಶ್ ತೆರೆ ಎಳೆದಿದ್ದಾರೆ. ತಮ್ಮ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಸುದೀರ್ಘ ಪತ್ರ ಬರೆದು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಮತದಾನದ ಪ್ರಕ್ರಿಯೆಯಲ್ಲಿ ತಾವು ತಡವಾಗಿ ಭಾಗವಹಿಸಿದ್ದನ್ನೇ ಬಂಡವಾಳ ಮಾಡಿಕೊಂಡು, ಕೆಲವರು ತಮ್ಮ ವಿರುದ್ಧ ಆಧಾರರಹಿತ ಮತ್ತು ಕಲ್ಪಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಸುರೇಶ್ ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ತಾವು ಯಾವುದೇ ಪಕ್ಷವಿರೋಧಿ ಚಟುವಟಿಕೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, "ನಾನು ವಿಧಾನಸಭೆಯ ವಿರೋಧ ಪಕ್ಷದ ನಾಯಕರ ಅಧಿಕೃತ ಸೂಚನೆ ಮತ್ತು ಮಾರ್ಗದರ್ಶನದ ಮೇರೆಗೇ ನನ್ನ ಮತವನ್ನು ಚಲಾಯಿಸಿದ್ದೇನೆ" ಎಂದು ಸ್ಪಷ್ಟನೆ ನೀಡಿದ್ದಾರೆ.

ಮುಂದುವರಿದು, ಮಾಧ್ಯಮಗಳಲ್ಲಿ ಮತ್ತು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಇಂತಹ ಸುಳ್ಳು ಊಹಾಪೋಹದ ಹೇಳಿಕೆಗಳಿಂದ ಸಾರ್ವಜನಿಕವಾಗಿ ತಮ್ಮ ಘನತೆ ಹಾಗೂ ಗೌರವಕ್ಕೆ ತೀವ್ರ ಧಕ್ಕೆಯಾಗಿದೆ ಎಂದು ಎಚ್.ಕೆ. ಸುರೇಶ್ ಪತ್ರದ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

Edited By : Nirmala Aralikatti
PublicNext

PublicNext

19/06/2026 07:22 pm

Cinque Terre

2.95 K

Cinque Terre

0

ಸಂಬಂಧಿತ ಸುದ್ದಿ