ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎನ್.ಆರ್.ಪುರ: ಗಸ್ತು ತಿರುಗುತ್ತಿದ್ದ ಫಾರೆಸ್ಟ್ ವಾಚರ್ ಮೇಲೆ ಕಾಡಾನೆ ಅಟ್ಯಾಕ್: ಸಿಬ್ಬಂದಿ ಗಂಭೀರ ಗಾಯ

ಎನ್.ಆರ್.ಪುರ: ಕಾಫಿನಾಡಿನಲ್ಲಿ ಕಾಡಾನೆ ಹಾಗೂ ಮಾನವ ಸಂಘರ್ಷ ಮುಂದುವರೆದಿದ್ದು ಭದ್ರಾ ವನ್ಯಜೀವಿ ವಿಭಾಗದ ಸಿಬ್ಬಂದಿ ಮೇಲೆ ಕಾಡಾನೆಯೊಂದು ದಾಳಿ ನಡೆಸಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹೆಬ್ಬೆ ವನ್ಯಜೀವಿ ವಲಯಕ್ಕೆ ಒಳಪಡುವ ಮೋರಿಮಠ ಎಂಬಲ್ಲಿ ಈ ದುರ್ಘಟನೆ ನಡೆದಿದೆ.

ಭದ್ರಾ ಹಿನ್ನೀರು ಪ್ರದೇಶದ ಬಳಿ ಎಂದಿನಂತೆ ಗಸ್ತು ತಿರುಗುತ್ತಿದ್ದ ಫಾರೆಸ್ಟ್ ವಾಚರ್ ಮೇಲೆ ಒಂಟಿ ಆನೆಯೊಂದು ದಿಢೀರನೆ ದಾಳಿ ಮಾಡಿದೆ. ಆನೆಯ ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡಿರುವ ವಾಚರ್ ಅವರ ಪರಿಸ್ಥಿತಿ ಸದ್ಯ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಭದ್ರಾ ಹಿನ್ನೀರಿನ ಪರಿಸರದಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು, ಈ ಭಾಗದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಎನ್.ಆರ್.ಪುರ ಪಟ್ಟಣದಿಂದ ಕೇವಲ 10 ಕಿಲೋಮೀಟರ್ ದೂರದಲ್ಲೇ ಈ ಕಾಡಾನೆಗಳು ಓಡಾಟ ನಡೆಸುತ್ತಿರುವುದರಿಂದ ಅರಣ್ಯ ಇಲಾಖೆ ಸಿಬ್ಬಂದಿ, ಆನೆಗಳು ಜನ ವಸತಿ ಪ್ರದೇಶಕ್ಕೆ ಬರದಂತೆ ನಿಗಾ ಇರಿಸಿದ್ದಾರೆ.

Edited By : Abhishek Kamoji
Kshetra Samachara

Kshetra Samachara

19/06/2026 07:29 pm

Cinque Terre

2.62 K

Cinque Terre

0

ಸಂಬಂಧಿತ ಸುದ್ದಿ