ಮೊಳಕಾಲ್ಮುರು: ರಸ್ತೆ ಅಪಘಾತಗಳಲ್ಲಿ ತಲೆಗೆ ಆಗುವ ಗಂಭೀರ ಗಾಯಗಳನ್ನು ತಡೆಗಟ್ಟುವ ಉದ್ದೇಶದಿಂದ ಮೊಳಕಾಲ್ಮೂರು ಪೊಲೀಸರು ಹೆಲ್ಮೆಟ್ ಜಾಗೃತಿ ಅಭಿಯಾನ ಹಮ್ಮಿಕೊಂಡರು.
ಮೊಳಕಾಲ್ಮೂರು ಪೊಲೀಸ್ ಠಾಣೆಯ ನೇತೃತ್ವದಲ್ಲಿ ನಡೆದ ಹೆಲ್ಮೆಟ್ ಜಾಗೃತಿ ರ‍್ಯಾಲಿಯಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದರು. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ರ‍್ಯಾಲಿಯ ವೇಳೆ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು, ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ಸಾರ್ವಜನಿಕರಿಗೆ ಮನವಿ ಮಾಡಲಾಯಿತು.
ಹೆಲ್ಮೆಟ್ ಧರಿಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಜೀವ ರಕ್ಷಣೆ ಸಾಧ್ಯವಾಗುತ್ತದೆ. ದ್ವಿಚಕ್ರ ವಾಹನ ಸವಾರರು ಹಾಗೂ ಹಿಂಬದಿ ಸವಾರರೂ ಸಹ ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂದು ಪೊಲೀಸರು ತಿಳಿಸಿದರು.
ರ್ಯಾಲಿಯಲ್ಲಿ ಸಿಪಿಐ ನಾಗರಾಜ್, ಪಿಎಸ್ ಐ ಮಹೇಶ್ ಲಕ್ಷ್ಮಣ್ ಹೊಸಪೇಟೆ ಸೇರಿದಂತೆ ಠಾಣೆಯ ಸಿಬ್ಬಂದಿಗಳು ಇದ್ದರು.
Kshetra Samachara
19/06/2026 07:45 pm
LOADING...