ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಕಿಲ್ಲರ್ ಬಿಎಂಟಿಸಿ ಬಸ್ಸಿಗೆ ಒಂದೇ ಕುಟುಂಬದ ಮೂವರು ಬಲಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಅಪ್ಪ, ಅಮ್ಮ ಮತ್ತು ಮಗಳು ಸ್ಥಳದಲ್ಲೇ ದುರಂತ ಸಾವಿಗೀಡಾಗಿದ್ದಾರೆ. ಈ ಹೃದಯ ವಿದ್ರಾವಕ ಘಟನೆ ಸೂಲಿಬೆಲೆ-ಹೊಸಕೋಟೆ ಮಾರ್ಗದಲ್ಲಿ ನಡೆದಿದೆ.

ಸೂಲಿಬೆಲೆ ಕಡೆಯಿಂದ ಹೊಸಕೋಟೆ ಕಡೆಗೆ ಚಲಿಸುತ್ತಿದ್ದ ಬಿಎಂಟಿಸಿ ಬಸ್, ರಾಂಗ್ ರೂಟ್‌ನಲ್ಲಿ ಬಂದು ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಭಾರಿ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

Edited By : Vinayak Patil
PublicNext

PublicNext

19/06/2026 08:00 pm

Cinque Terre

8.67 K

Cinque Terre

0