ಸಾಮಾಜಿಕ ಜಾಲತಾಣವಾದ ಎಕ್ಸ್ (X) ನಲ್ಲಿ ಪ್ರಕಟವಾದ ವೀಡಿಯೋವೊಂದು ಸದ್ಯ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಾರ್ವಜನಿಕ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳು ಪರಸ್ಪರ ಕಿತ್ತಾಡಿಕೊಳ್ಳುತ್ತಾ ಪಕ್ಕದಲ್ಲೇ ಇದ್ದ ತೆರೆದ ಚರಂಡಿಗೆ ಬಿದ್ದಿದ್ದಾರೆ.
ರಸ್ತೆಯ ಮಧ್ಯೆ ಇಬ್ಬರು ವ್ಯಕ್ತಿಗಳು ತೀವ್ರವಾಗಿ ಜಗಳವಾಡುತ್ತಿದ್ದರು. ಈ ಸಂದರ್ಭ ಹಿಡಿತ ತಪ್ಪಿದ ಇಬ್ಬರೂ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಇದ್ದ ತೆರೆದ ಗಲೀಜು ಚರಂಡಿಯೊಳಗೆ ಒಟ್ಟಿಗೆ ಬಿದ್ದಿದ್ದಾರೆ.
ಈ ಘಟನೆ ನಡೆಯುವಾಗ ಹಿನ್ನೆಲೆಯಲ್ಲಿ ಹಸುವೊಂದು ಕಸವನ್ನು ತಿನ್ನುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.
ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ವೀಕ್ಷಣೆಗಳನ್ನು ಪಡೆದಿದ್ದು, ನೆಟ್ಟಿಗರು ಮೂಲಸೌಕರ್ಯಗಳ ಕೊರತೆ ಹಾಗೂ ಸಾರ್ವಜನಿಕ ನಡವಳಿಕೆಯ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.
PublicNext
19/06/2026 08:08 pm
LOADING...