ಭಟ್ಕಳ: ಪೊಲೀಸ್ ಠಾಣೆ ಎದುರು ನಡೆದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಪದಗಳನ್ನು ಬಳಸಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಗೋವಿಂದ ನಾಯ್ಕ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಭಟ್ಕಳ ಗ್ರಾಮೀಣ ಠಾಣೆಯ ಪಿಐ ವೆಂಕಟೇಶ ಮುರನಾಳ ಅವರು ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಈ ಪ್ರಕರಣವು ಹಿಂದೂ ಯುವತಿಯೊಬ್ಬಳನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ವೇಳೆ ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆಗೆ ಸಂಬಂಧಿಸಿದೆ. ಆ ಸಂದರ್ಭದಲ್ಲಿ, ಯುವತಿಯ ರಕ್ಷಣೆಗೆ ಮುಂದಾದ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧವೇ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಗೋವಿಂದ ನಾಯ್ಕ, ತಪ್ಪು ಮಾಡಿದ ಆರೋಪಿಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವ ಬದಲು, ಯುವತಿಯ ರಕ್ಷಣೆಗೆ ಮುಂದಾದ ಕಾರ್ಯಕರ್ತರ ಮೇಲೆಯೇ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿದ್ದರು.
ಗೋವಿಂದ ನಾಯ್ಕ ಅವರ ಈ ಭಾಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ, ಪ್ರಚೋದನಕಾರಿ ಭಾಷಣದ ಆರೋಪದ ಮೇಲೆ ಅವರ ವಿರುದ್ಧ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.
PublicNext
19/06/2026 08:22 pm
LOADING...