ಶಿವಮೊಗ್ಗ : ಯಥೇಚ್ಛವಾಗಿ ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳ ಬಳಕೆಯಿಂದ ಇಂದು ಅನ್ನ ವಿಷವಾಗಿ ಪರಿವರ್ತನೆಯಾಗುತ್ತಿದ್ದು, ಇದನ್ನು ತಪ್ಪಿಸಲು ರೈತರು ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಸಲಹೆ ನೀಡಿದರು.
ಕೃಷಿ ಭೂಮಿ ಉಳಿಸಿ ಆಂದೋಲನ ಅಂಗವಾಗಿ ಐಸಿಎಆರ್–ಕೃಷಿ ವಿಜ್ಞಾನ ಕೇಂದ್ರ ಮತ್ತು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಸಂಯುಕ್ತ ಆಶ್ರಯದಲ್ಲಿ ನಗರದಲ್ಲಿ ಇಂದು ಆಯೋಜಿಸಿದ್ದ ಸಾವಯವ ಕೃಷಿ ಕುರಿತ ಒಂದು ದಿನದ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಆರೋಗ್ಯಕರ ಮಣ್ಣು, ಸದೃಢ ರೈತರು, ಸಮೃದ್ಧ ಭಾರತ” ಧ್ಯೇಯದೊಂದಿಗೆ ಮಣ್ಣಿನ ಫಲವತ್ತತೆ ಕಾಪಾಡಲು ದೇಶಾದ್ಯಂತ ಈ ವಿಶೇಷ ಅಭಿಯಾನ ನಡೆಯುತ್ತಿದೆ. ರಾಸಾಯನಿಕ ಪೀಡೆನಾಶಕಗಳ ಬದಲಿಗೆ ಜೈವಿಕ ಕೀಟನಾಶಕಗಳನ್ನು ಬಳಸಿ ವಿಷಮುಕ್ತ ಆಹಾರ ಉತ್ಪಾದನೆಗೆ ಒತ್ತು ನೀಡಬೇಕು. ಸಾವಯವ ಪದ್ಧತಿಯಲ್ಲಿ ಇಳುವರಿ ಸ್ವಲ್ಪ ಕಡಿಮೆ ಬಂದರೂ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಹೆಚ್ಚಿನ ಬೆಲೆಗೆ ಖರೀದಿಸಲು ಜನರು ಸಿದ್ಧರಿದ್ದಾರೆ. ಆದ್ದರಿಂದ ರೈತರು ಮಣ್ಣಿನ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
Kshetra Samachara
19/06/2026 08:49 pm
LOADING...